ಲಖನೌ : ಸಮಾಜವಾದಿ ಪಕ್ಷದ ಮುಖ್ಯಸ್ಥ, ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರು ಅಸ್ವಸ್ಥರಾಗಿದ್ದು, ಲಖನೌದ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ 5 ದಿನಗಳಿಂದ ಮುಲಾಯಂ ಸಿಂಗ್ 2ನೇ ಬಾರಿ ಆಸ್ಪತ್ರೆ ಸೇರಿದ್ದಾರೆ. ದೀರ್ಘಕಾಲದ ಮಲಬದ್ಧತೆಯಿಂದ ಬಳಲುತ್ತಿದ್ದ ಮುಲಾಯಂ ಸಿಂಗ್ ಗೆ ಕೊಲೊನೋಸ್ಕೋಪಿ ನಡೆಸಲಾಗಿತ್ತು. ಹೀಗಾಗಿ ಕಳೆದ ಬುಧವಾರದಿಂದ ಶನಿವಾರದವರೆಗೂ ಅವರು ಆಸ್ಪತ್ರೆಯಲ್ಲಿದ್ದರು. ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ ಒಂದೇ ದಿನಕ್ಕೆ ಹೊಟ್ಟೆನೋವು ಎಂದು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮುಲಾಯಂ ಸಿಂಗ್ ಕರುಳಲ್ಲಿ ಊತ ಕಾಣಿಸಿಕೊಂಡಿದ್ರಿಂದ ಹೊಟ್ಟೆನೋವು ಬಂದಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.








