ರಾಜ್ಯದ ಜನತೆಗೆ ಕರೆಂಟ್ ಶಾಕ್..? electricity saaksha tv
ಬೆಂಗಳೂರು : ಕೊರೊನಾ ಸಂಕಷ್ಟದ ನಡುವೆ ರಾಜ್ಯದ ಜನರು ಪೆಟ್ರೋಲ್, ಡೀಸೆಲ್, ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ.
ಇದೀಗ ಗಾಯದ ಮೇಲೆ ಬರೆ ಎಳೆಯುವಂತೆ ಶೀಘ್ರದಲ್ಲಿಯೇ ವಿದ್ಯುತ್ ದರ ಏರಿಕೆಯ ಬಿಸಿ ಜನರಿಗೆ ತಟ್ಟಲಿದೆ.
ನಷ್ಟದ ನೆಪ ಹೇಳಿ ಕೆಇಆರ್‌ಸಿಗೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ.
ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್‌ಗೆ 1.50 ಪೈಸೆ ಹೆಚ್ಚಳ ಮಾಡುವಂತೆ ಕೆಇಆರ್ ಸಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಿವೆ.
ಮೂಲಗಳ ಪ್ರಕಾರ ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.
ಇನ್ನು ದೇಶದಲ್ಲಿ ಈಗಾಗಲೇ ಪೆಟ್ರೋಲ್, ಡೀಸೆಲ್, ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ.









