ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ
ರಾಜ್ಯದಲ್ಲಿ ಕರೋನಾ ಹೊಸ ರೂಪಾಂತರಿ ವೈರಸ್ ಓಮಿಕ್ರಾನ್ ನ 3 ಪ್ರಕರಣ ದಾಖಲಾಗಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ 34 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಸೋಂಕು ಇರುವು ಪತ್ತೆಯಾಗಿದೆ. ಸದ್ಯ ಅವರಿಗೆ ಸರ್ಕಾರಿ ಆಸ್ಪತ್ರೆ ಚಿಕಿತ್ಸೆ ಕೊಡಲಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
“ಕರ್ನಾಟಕದಲ್ಲಿ #Omicron ನ ಮೂರನೇ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ 34 ವರ್ಷದ ವ್ಯಕ್ತಿಗೆ ತಪಾಸಣೆಯಲ್ಲಿ ಪಾಸಿಟೀವ್ ಬಂದಿದೆ. ಅವರನ್ನು ಪ್ರತ್ಯೇಕಿಸಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಪ್ರಾಥಮಿಕ ಮತ್ತು 15 ದ್ವಿತೀಯ ಸಂಪರ್ಕಗಳನ್ನು ಪತ್ತೆಹಚ್ಚಲಾಗಿದೆ. ಅವರ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.” ಎಂದು ಟ್ವೀಟ್ ಮಾಡಿದ್ದಾರೆ.
ಈ ಮೂಲಕ ಒಮಿಕ್ರಾನ ಸೋಂಕಿನ ಸಂಖ್ಯೆ ಭಾರತದಲ್ಲಿ 33ಕ್ಕೇ ಏರಿಕೆಯಾದರೆ ಕರ್ನಾಟಕದಲ್ಲಿ ಇದು ಮೂರನೆ ಪ್ರಕರಣ. ಮುಂಬೈನಲ್ಲಿ ಅತಿ ಹೆಚ್ಚು ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ. ಪಂಜಾಬ್ ದೆಹಲಿಯಲ್ಲಿಯೂ ನಿನ್ನೆ ವೈರಸ್ ಪತ್ತೆಯಾದ ಪ್ರಕರಣಗಳು ವರದಿಯಾಗಿದೆ.








