ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರಿದಿದ್ದು, ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆ ಅವಧಿಯಲ್ಲಿ ರಾಜ್ಯದ 10 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ. ಇಂದು ಕೂಡ ದಾವಣಗೆರೆಯಲ್ಲಿ ಮೂವರಲ್ಲಿ ಕೊರೊನಾ ಸೋಂಕು ದೃಢವಾಗಿದ್ದರೆ, ಬೀದರ್ ಮತ್ತು ಬಾಗಲಕೋಟೆಯಲ್ಲಿ ತಲಾ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಕಲಬುರಗಿ ಹಾಗೂ ಹಾವೇರಿ, ವಿಜಯಪುರದಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢವಾಗಿದೆ.
ಕೊರೊನಾ ಸೋಂಕಿನಿಂದಾಗಿ ಬೆಂಗಳೂರಲ್ಲಿ 56 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿನ ಕಾರಣದಿಂದಾಗಿ ಒಟ್ಟು 31 ಮಂದಿ ಮೃತಪಟ್ಟಿದ್ದಾರೆ. ಜೊತೆಗೆ ಒಟ್ಟು 422 ಜನರು ಕೊರೊನಾ ಸೋಂಕು ಮುಕ್ತರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್ ಪತ್ತೆ?
ದಾವಣಗೆರೆ-03
ಬಾಗಲಕೋಟೆ- 02
ಬೀದರ್-02
ಕಲಬುರಗಿ-01
ಹಾವೇರಿ -01
ವಿಜಯಪುರ-01








