ನವದೆಹಲಿ : ಲಾಕ್ ಡೌನ್ 3.0 ಅವಧಿ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದ್ದು,ಇಂದು ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದಾರೆ.
ಈಗಾಗಲೇ ಮುಖ್ಯಮಂತ್ರಿಗಳೊಂದಿಗಿನ ಮೋದಿಯವರ ವಿಡಿಯೋ ಕಾನ್ಫರೆನ್ಸ್ ಸಭೆ ಪ್ರಾರಂಭವಾಗಿದೆ. ಈ ಬಾರಿ ಎಲ್ಲ ರಾಜ್ಯಗಳ ಸಿಎಂಗಳಿಗೆ ಪ್ರತಿಯೊಬ್ಬರಿಗೂ ಮಾತನಾಡಲು 20 ನಿಮಿಷ ಅವಕಾಶ ಕೊಡಲಾಗಿದೆ.
ಮೊದಲನೇದಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರೊಂದಿಗೆ ಮೋದಿಯವರು ಚರ್ಚೆ ಮಾಡುತ್ತಿದ್ದು, ನಮ್ಮ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ 19ನೇಯವರಾಗಿ ಮಾತನಾಡಲಿದ್ದಾರೆ.








