ಕೊರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಲ್ಲಿದ್ದ ಲಾಕ್ ಡೌನ್ ಮೇ 17 ಕ್ಕೆ ಕೊನೆಗೊಳ್ಳುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳಕ್ಕೆ ಅನ್ಯಾಯವಾಗುತ್ತಿದೆ. ಕೊರೋನಾ ಸೋಂಕಿನ ವಿಷಯದಲ್ಲಿ ಕೇಂದ್ರ ನಮ್ಮ ಜತೆ ರಾಜಕೀಯ ಆಟ ಆಡುತ್ತಿದೆ ಎಂದು ಗುಡುಗಿದರು.
ಕೊರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಎಲ್ಲಾ ರಾಜ್ಯಗಳಿಗೂ ಸಮನಾಗಿ ಮಹತ್ವ ನೀಡಬೇಕು. ಆದರೆ ಕೇಂದ್ರ ಸರ್ಕಾರ ತನ್ನಿಷ್ಟದ ರಾಜ್ಯಗಳ ಜೊತೆ ಮಾತ್ರ ಚೆನ್ನಾಗಿದ್ದು, ನಮ್ಮ ಸಲಹೆ ಸೂಚನೆಗಳನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ ಎಂದು ದೂರಿದರು.
ಕೊರೋನ ವಿರುದ್ಧ ಎಲ್ಲಾ ರಾಜ್ಯಗಳು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಿದ್ದು, ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಸಹಕಾರ ನೀಡಬೇಕು ಎಂದು ಮಮತಾ ಬ್ಯಾನರ್ಜಿ ಸಲಹೆ ನೀಡಿದರು.
ಕೆಲವು ದಿನಗಳ ಹಿಂದೆ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ನಮಗೆ ಸರಿಯಾದ ಮೆಡಿಕಲ್ ಕಿಟ್ ನೀಡುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ ಬಾಂಗ್ಲಾ-ಭಾರತ ನಡುವೆ ಗೂಡ್ಸ್ ವಾಹನ ಸಂಚಾರಕ್ಕೆ ತೊಂದರೆ ಮಾಡುತ್ತಿದ್ದು, ರಾಜ್ಯದಲ್ಲಿ ವಲಸೆ ಕಾರ್ಮಿಕರು ಹೋಗಲು ರೈಲ್ವೆಗೆ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿತ್ತು.
ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಲು ಈ ಉಪಾಯ ಮಾಡಿ
ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ ಕೂತಿದ್ದರು ಸಹ ಮನಸ್ಸು ಮಾತ್ರ ಬೇರೆ ಕಡೆ ಇರುತ್ತದೆ ಮತ್ತು ವಿದ್ಯಾಭ್ಯಾಸದ...








