ವೆಸ್ಟ್ ಇಂಡೀಸ್ ತಂಡದ ಪಾಕ್ ಪ್ರವಾಸಕ್ಕೆ ಬ್ರೇಕ್ – ಕಾರಣ ಕೋವಿಡ್ -19…! West Indies saaksha tv
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಪಾಕ್ ಪ್ರವಾಸಕ್ಕೆ ಬ್ರೇಕ್ ಬಿದ್ದಿದೆ. ವೆಸ್ಟ್ ಇಂಡೀಸ್ ನ ಐದು ಮಂದಿಗೆ ಮಹಾಮಾರಿ ಕೋವಿಡ್ -19 ಸೋಂಕು ದೃಢಪಟ್ಟಿರುವುದರಿಂದ ಉಭಯ ದೇಶಗಳ ಕ್ರಿಕೆಟ್ ಮಂಡಳಿಗಳು ಏಕದಿನ ಸರಣಿಯನ್ನು ರದ್ದುಗೊಳಿಸಿವೆ.
ಮೂರನೇ ಟಿ-20 ಪಂದ್ಯಕ್ಕೂ ಮುನ್ನ ನಡೆದ ಸಭೆಯಲ್ಲಿ ವೆಸ್ಟ್ ಇಂಡೀಸ್ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗಳ ಅಧಿಕಾರಿಗಳು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ವೆಸ್ಟ್ ಇಂಡೀಸ್ ತಂಡದ ಐದು ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇನ್ನುಳಿದ 21 ಮಂದಿಯ ವರದಿ ನೆಗೆಟಿವ್ ಬಂದಿದೆ.
ಹೀಗಾಗಿ ವೆಸ್ಟ್ ಇಂಡೀಸ್ ನ 21 ಮಂದಿ ತವರಿಗೆ ತೆರಳಲಿದ್ದಾರೆ. ಕೋವಿಡ್ ಸೋಂಕಿನಿಂದ ಬಳಲುತ್ತಿರುವ ಐದು ಮಂದಿ ಕೋವಿಡ್ ಮಾರ್ಗಸೂಚಿಯಂತೆ ಕ್ವಾರಂಟೈನ್ ನಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಯ ಪ್ರಕಾರವೇ ಅವರು ತವರಿಗೆ ತೆರಳಲಿದ್ದಾರೆ.
ಪಾಕಿಸ್ತಾನ ವಿರುದ್ಧ ವೆಸ್ಟ್ ಇಂಡೀಸ್ ಮೂರು ಏಕದಿನ ಪಂದ್ಯಗಳನ್ನು ಆಡಬೇಕಿತ್ತು. ಇದೀಗ ಈ ಸರಣಿ ರದ್ದುಗೊಂಡಿರುವುದರಿಂದ ಮುಂದಿನ ವರ್ಷ ಜೂನ್ ನಲ್ಲಿ ಸರಣಿ ನಡೆಯಲಿದೆ.









