ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೈರತಿ ಬಸವರಾಜು ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

Mahesh M Dhandu by Mahesh M Dhandu
December 17, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೈರತಿ ಬಸವರಾಜು ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಭೂ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಎದುರಿಸುತ್ತಿರುವ ಬೈರತಿ ಬಸವರಾಜು ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು  ಬಿಜೆಪಿ  ಸರ್ಕಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಡಿ.ವೈ.ಎಸ್.ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಾಗ ಪ್ರಕರಣದ ನೈತಿಕ ಹೊಣೆ ಹೊತ್ತು ಕೆ.ಜೆ.ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದರು.  ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿ ತಿಂಗಳಾಗುತ್ತಾ ಬಂದರೂ ಬೈರತಿ ಬಸವರಾಜ್ ರಾಜೀನಾಮೆ ಪಡೆಯದ ಬಿಜೆಪಿ ಅವರಿಗೆ ಸರ್ಕಾರ ನಡೆಸಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಇಂದು ಬೈರತಿ ಬಸವರಾಜ್ ಅವರ ಮೇಲಿನ ಭೂ ಹಗರಣದ ಆರೋಪದ ಬಗ್ಗೆ ಸದನದಲ್ಲಿ ಚರ್ಚೆ ನಡೆಸಿದರೆ ನ್ಯಾಯಾಲಯದ ವಿಚಾರಣೆಯ ಮೇಲೆ ಪ್ರಭಾವ ಬೀರುತ್ತದೆ, ಆದ್ದರಿಂದ ಸದನದ ನಿಯಾಮಾವಳಿಗಳಲ್ಲಿ ಚರ್ಚೆ ಅವಕಾಶವಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಡಿ.ಕೆ ರವಿ ಮತ್ತು ಗಣಪತಿ ಅವರು ವೈಯಕ್ತಿಕ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗ ಇದೇ ಜಗದೀಶ್ ಶೆಟ್ಟರ್, ಆರ್.ಅಶೋಕ್, ಬಸವರಾಜ ಬೊಮ್ಮಾಯಿ ಅವರು ನಿಯಮ 60 ರಡಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿರಲಿಲ್ಲವೇ?

ಈಗಿನಂತೆ ಹಿಂದೆಯೂ ಐ.ಪಿ.ಸಿ ಸೆಕ್ಷನ್ 200 ರಡಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿ ಪ್ರಕರಣ ನ್ಯಾಯಾಲಯದಲ್ಲಿತ್ತು, ಸದನದ ಅಂದಿನ ನಿಯಮಾವಳಿಗಳೇ ಇಂದೂ ಇವೆ, ಅಂದು ಹಠ ಹಿಡಿದು ಚರ್ಚೆ ನಡೆಸಿದಾಗ ನ್ಯಾಯಾಲಯದ ವಿಚಾರಣೆ ಮೇಲೆ ಪ್ರಭಾವ ಬೀರದ್ದು ಇಂದು ಮಾತ್ರ ಬೀರುತ್ತದೆಯೇ ಎಂದು ಗರಂ ಆಗಿದ್ದಾರೆ.

Siddaramaiah saaksha tv

ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್ ಪುರಂ ಹೋಬಳಿಯ ಕಲ್ಕೆರೆಯಲ್ಲಿರುವ 22 ಎಕರೆ ಜಮೀನನ್ನು ಅಣ್ಣಯ್ಯಪ್ಪ ಎಂಬುವರಿಂದ 21/05/2003 ರಲ್ಲಿ ಖಾಲಿ ಛಾಪಾ ಕಾಗದಕ್ಕೆ ಸಹಿ ಹಾಕಿಸಿಕೊಂಡು ಕಾನೂನು ಬಾಹಿರವಾಗಿ ಬೈರತಿ ಬಸವರಾಜ್ ಅವರು ಖರೀದಿ ಮಾಡಿದ್ದಾರೆ ಎಂಬ ಆರೋಪವಿದೆ.

ದೂರುದಾರರಾದ ಮಾದಪ್ಪ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲು ಮಾಡಿದ ನಂತರ ಪೊಲೀಸರು ಬಿ ರಿಪೋರ್ಟ್ ಹಾಕಿದ್ದರು. ಇದನ್ನು ಪ್ರಶ್ನಿಸಿ ಮಾದಪ್ಪನವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯವು ಪೊಲೀಸರ ಬಿ ರಿಪೋರ್ಟ್ ಅನ್ನು ವಜಾಗೊಳಿಸಿ, ಸೆಕ್ಷನ್ 120(B), 420, 427, 465, 467, 471 ಗಳಡಿಯಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿಕೊಂಡು, ಸಮನ್ಸ್ ಜಾರಿಗೊಳಿಸುವಂತೆ ಆದೇಶಿಸಿದೆ. ಇವುಗಳಲ್ಲಿ ಕೆಲವು ಜಾಮೀನುರಹಿತ ಅಪರಾಧಗಳಾಗಿವೆ.

ಡಿ.ಕೆ ರವಿ ಹಾಗೂ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನಮ್ಮ ಸರ್ಕಾರ ಸಿ.ಬಿ.ಐ ತನಿಖೆಗೆ ಒಪ್ಪಿಸಿತ್ತು. ಎರಡೂ ಪ್ರಕರಣದಲ್ಲಿ ಜಾರ್ಜ್ ಅವರು ನಿರಪರಾಧಿ ಎಂದು ವರದಿ ಬಂದಿದೆ. ಕೆಜೆ ಜಾರ್ಜ್  ಅವರಿಗೆ ನೈತಿಕತೆ ಆಧಾರದಲ್ಲಿ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಅವರಿಗೂ ನೈತಿಕತೆ ಇರಬೇಕಲ್ಲವೇ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

ಡಿ.ಕೆ ರವಿ ಹಾಗೂ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನಮ್ಮ ಸರ್ಕಾರ ಸಿ.ಬಿ.ಐ ತನಿಖೆಗೆ ಒಪ್ಪಿಸಿತ್ತು. ಎರಡೂ ಪ್ರಕರಣದಲ್ಲಿ ಜಾರ್ಜ್ ಅವರು ನಿರಪರಾಧಿ ಎಂದು ವರದಿ ಬಂದಿದೆ. @thekjgeorge ಅವರಿಗೆ ನೈತಿಕತೆ ಆಧಾರದಲ್ಲಿ ರಾಜೀನಾಮೆಗೆ ಒತ್ತಾಯಿಸಿದ @BJP4Karnataka ಅವರಿಗೂ ನೈತಿಕತೆ ಇರಬೇಕಲ್ಲವೇ? 9/11#ResignByrathiBasavaraj

— Siddaramaiah (@siddaramaiah) December 17, 2021

ಬಿಜೆಪಿಯವರಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿದ್ದರೆ, ರಾಜ್ಯದ ಜನರಿಗೆ ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತ ನೀಡಬೇಕು ಎಂಬ ಆಶಯವಿದ್ದರೆ ತಕ್ಷಣ ಬೈರತಿ ಬಸವರಾಜ್ ಅವರ ರಾಜೀನಾಮೆ ಪಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ.

ಪ್ರಕರಣವು ತಾರ್ಕಿಕ ಅಂತ್ಯ ಕಾಣುವವರೆಗೆ ನಾವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸಮಯಾವಕಾಶದ ಕೊರತೆ ಇದೆ ಎನಿಸಿದರೆ ಬಿಜೆಪಿ ಸರ್ಕಾರ ಸದನವನ್ನು ಒಂದು ತಿಂಗಳವರೆಗೆ ಮುಂದುವರೆಸಲಿ, ನಾವು ಸದನಕ್ಕೆ ಹಾಜರಾಗಲು ಸಿದ್ಧರಿದ್ದೇವೆ. ಭೂ ಹಗರಣದ ಚರ್ಚೆಯಾಗಲೇಬೇಕು ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮೂಖೇನ ಆಗ್ರಹಿಸಿದ್ದಾರೆ.

Tags: #Saaksha TVbairati basavarajuBJPCongressSiddaramaiah
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram