ಅಪಪ್ರಚಾರ ಮಾಡೋದಕ್ಕೆ ಕಾಂಗ್ರೆಸ್ Congress ಅಧಿವೇಶನವನ್ನ ಬಳಸಿಕೊಳ್ಳುತ್ತಿದೆ : ಬಿಜೆಪಿ
ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆಯಾಮಗಳಲ್ಲಿ ಅಪಪ್ರಚಾರದ ಸಂಚು ನಡೆಸುವುದಕ್ಕಾಗಿಯೇ ಕಾಂಗ್ರೆಸ್ ಬೆಳಗಾವಿ ಅಧಿವೇಶನದ ಸಮಯ ಬಳಸಿಕೊಳ್ಳುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.
ಕಾಂಗ್ರೆಸ್ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿಕಾರಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆಯಾಮಗಳಲ್ಲಿ ಅಪಪ್ರಚಾರದ ಸಂಚು ನಡೆಸುವುದಕ್ಕಾಗಿಯೇ ಕಾಂಗ್ರೆಸ್ ಬೆಳಗಾವಿ ಅಧಿವೇಶನದ ಸಮಯ ಬಳಸಿಕೊಳ್ಳುತ್ತಿದೆಯೇ? ಹೌದು, ಮೊದಲ ದಿನದಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿ ಹಾಗೂ ಘಟನಾವಳಿಗಳು ಇದನ್ನೇ ಹೇಳುತ್ತಿವೆ.
https://twitter.com/BJP4Karnataka/status/1472439551041880066?s=20
ಕೆಂಪುಕೋಟೆಗೆ ಖಲಿಸ್ತಾನಿಗಳು, ನಗರ ನಕ್ಸಲರು ದಾಳಿ ನಡೆಸಿದ ರೀತಿ ಬೆಳಗಾವಿ ಅಧಿವೇಶನಕ್ಕೆ ಟ್ರ್ಯಾಕ್ಟರ್ ಮೂಲಕ ಪ್ರವೇಶಿಸಲು ಕಾಂಗ್ರೆಸ್ಸಿಗರು ಯತ್ನಿಸಿದರು. ಒಂದೊಮ್ಮೆ #ನಾಡದ್ರೋಹಿಕಾಂಗ್ರೆಸ್ ಪ್ರಯತ್ನ ಸಫಲವಾಗಿ, ಕಾಂಗ್ರೆಸ್ ಕಾರ್ಯಕರ್ತರ ಮುಖವಾಡ ಧರಿಸಿ ಸಮಾಜ ವಿಘಟಕರು ಗುಂಪಿನಲ್ಲಿ ಸೇರಿಸಿದ್ದರೆ ಅಧಿವೇಶನದ ಕತೆ ಏನಾಗುತ್ತಿತ್ತು ಎಂದು ಪ್ರಶ್ನಿಸಿದೆ.
ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಬೆಳಗಾವಿಯಲ್ಲಿ ಅಧಿವೇಶನ ಆಯೋಜಿಸಲಾಗಿತ್ತು. ಆದರೆ #ನಾಡದ್ರೋಹಿಕಾಂಗ್ರೆಸ್ ಒಂದು ದಿನವೂ ಕಲಾಪ ನಡೆಯುವುದಕ್ಕೂ ಅವಕಾಶ ನೀಡಲಿಲ್ಲ. ಪ್ರಶ್ನೋತ್ತರ ಕಲಾಪವನ್ನೂ ತಮ್ಮ ಪ್ರತಿಷ್ಠೆಗೆ ಬಲಿ ಪಡೆಯಲು ಮುಂದಾದರು ಎಂದು ಬಿಜೆಪಿ ದೂರಿದೆ.








