ರಾಜ್ಯದ ಹಿತಕ್ಕೆ ಧಕ್ಕೆಯಾದಾಗ ಎಲ್ಲಾ ಪಕ್ಷಗಳು ಒಂದಾಗಬೇಕು : ಹೆಚ್.ಡಿ.ರೇವಣ್ಣ H D Rewanna saaksha tv
ಹಾಸನ : ರಾಜ್ಯದ ಹಿತಕ್ಕೆ ಧಕ್ಕೆಯಾದಾಗ ಎಲ್ಲಾ ಪಕ್ಷಗಳು ಒಂದಾಗಿ ನಮ್ಮ ರಾಜ್ಯದ ನೆಲ ಜಲ ಉಳಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ಪುಂಡಾಟಿಕೆ ಬಗ್ಗೆ ಹಾಸನದಲ್ಲಿ ಮಾತನಾಡಿದ ರೇವಣ್ಣ, ರಾಜ್ಯದ ಕನ್ನಡಿಗರಿಗೆ ಏನೇ ಆದರೂಧಕ್ಕೆ ತರುವಂತಹ ಸನ್ನವೇಶ ಬಂದರೆ ನಾವೆಲ್ಲ ಕನ್ನಡಿಗರು ಹೋರಾಟ ಮಾಡಬೇಕು. ಸರ್ಕಾರ ಇದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಈ ರಾಜ್ಯದ ಹಿತಕ್ಕೆ ಧಕ್ಕೆಯಾದಾಗ ಎಲ್ಲಾ ಪಕ್ಷಗಳು ಒಂದಾಗಿ ನಮ್ಮ ರಾಜ್ಯದ ನೆಲ ಜಲ ಉಳಿಸಿಕೊಳ್ಳಬೇಕು. ಇದರಲ್ಲಿ ಪಕ್ಷಭೇದ ಮರೆತು ಎಲ್ಲರೂ ಒಟ್ಟಾಗಬೇಕು ಎಂದು ಹೇಳಿದರು.
ಇನ್ನು ಬೆಳಗಾವಿಯಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ಮುಖ್ಯಮಂತ್ರಿಗಳಿಗೆ, ಗೃಹಮಂತ್ರಿಗಳಿಗೆ, ಬೆಳಗಾವಿ ಉಸ್ತುವಾರಿ ಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಬೇರೆ ಬೇರೆ ರಾಜ್ಯದಲ್ಲಿರುವ ಕನ್ನಡಿಗರ ಯಾವುದೇ ನೋವಾದಾಗ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಅದನ್ನು ತಡೆಗಟ್ಟುವ ಪ್ರಯತ್ನ ಪಡೆಬೇಕು. ಬೇರೆ ರಾಜ್ಯದಲ್ಲಿರುವ ಕನ್ನಡಿಗರ ರಕ್ಷಣೆಯಾಗಬೇಕು ಎಂದು ಆಗ್ರಹಿಸಿದರು.









