ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗುರಾಯ್ಸೋಕೆ ರೆಡಿಯಾಗಿದೆ ನಮ್ಮೂರ ಬುಲ್ಸ್.. ಸಪೋರ್ಟ್ ಮಾಡೋಕೆ ರೆಡಿಯಾಗಿ

Namratha Rao by Namratha Rao
December 20, 2021
in Newsbeat, Sports, ಕ್ರೀಡೆ
Pro Kabaddi saaksha tv
Share on FacebookShare on TwitterShare on WhatsappShare on Telegram

ಮತ್ತೆ ಪ್ರೋ ಕಬಡ್ಡಿ ಹಬ್ಬ, ಬೆಂಗಳೂರು ಬುಲ್ಸ್ ಅಭಿಯಾನ ಶುರು! Pro Kabaddi saaksha tv

ಗುರಾಯ್ಸೋಕೆ ರೆಡಿಯಾಗಿದೆ ನಮ್ಮೂರ ಬುಲ್ಸ್.. ಸಪೋರ್ಟ್ ಮಾಡೋಕೆ ರೆಡಿಯಾಗಿ

Related posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

June 13, 2026
Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

June 13, 2026

* ಮತ್ತೆ ರಂಜಿಸಲು ಬರುತ್ತಿದೆ ಪ್ರೋ ಕಬಡ್ಡಿ

* ಬಲಿಷ್ಠ ತಂಡದೊಂದಿಗೆ ಬೆಂಗಳೂರು ಬುಲ್ಸ್ ಅಭಿಯಾನ

* ಬೆಂಗಳೂರು ಬುಲ್ಸ್ ತಂಡ ಪ್ರಶಸ್ತಿ ಗೆಲ್ಲುವ ಫೆವರೇಟ್

*ನಮ್ಮ ಊರು, ನಮ್ಮ ಆಟ, ನಮ್ಮ ಹುಡುಗರು, ನಮ್ಮ ಬುಲ್ಸ್

ಬೆಂಗಳೂರು : ಕಬಡ್ಡಿ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ವಿವೋ ಪ್ರೋ ಕಬಡ್ಡಿ ಲೀಗ್ ಎರಡು ವರ್ಷಗಳ ನಂತರ ಮತ್ತೆ ರಂಜಿಸಲು ಬಂದಿದೆ.

ಬೆಂಗಳೂರು ಬುಲ್ಸ್ ತಂಡ ಸಹ ಪ್ರಶಸ್ತಿ ಗೆಲ್ಲಲು ಸಕಲ ಸಿದ್ಧತೆ ಮಾಡಿಕೊಂಡಿದೆ . ಕೊರೋನಾ ಕಾರಣದಿಂದ ಹಿಂದಿನ ಎರಡು ವರ್ಷಗಳ ಆವೃತ್ತಿ ನಡೆದಿರಲಿಲ್ಲ.

ಸೀಸನ್ 6 ಚಾಂಪಿಯನ್ಸ್ ಮತ್ತು ಈ ವರ್ಷದ ಫೆವರೇಟ್ ತಂಡ ಬೆಂಗಳೂರು ಬುಲ್ಸ್ ಡಿಸೆಂಬರ್ 22 ರಿಂದ ತವರಿನಿಂದಲೇ ಅಭಿಯಾನ ಆರಂಭಿಸಲಿದೆ.

ಕೊರೋನಾ ಸೋಂಕಿನ ಕಾರಣ ಪ್ರಪಂಚದಲ್ಲಿಯೇ ಕ್ರೀಡಾ ಚಟುವಟಿಕೆಗೆ ಬ್ರೇಕ್ ಬಿದ್ದಿತ್ತು. ಈಗ ಪರಿಸ್ಥಿತಿ ತಹಬದಿಗೆ ಬಂದಿರುವ ಕಾರಣ ಒಂದೊಂದೇ ಪಂದ್ಯಾವಳಿ ಆರಂಭವಾಗುತ್ತಿವೆ.

ಕೊರೋನಾ ನಿಯಮಗಳನ್ನು ಪಾಲಿಸುತ್ತ ಕಟ್ಟುನಿಟ್ಟಾದ ಬಯೋ ಬಬಲ್ ವ್ಯವಸ್ಥೆಯಲ್ಲಿ ತಂಡಗಳು ಕಣಕ್ಕೆ ಇಳಿಯಲಿವೆ.

ಡಿಸೆಂಬರ್ 22 ರಂದು ರಾತ್ರಿ 7:30 ಗಂಟೆಗೆ ಯು ಮುಂಬಾ ತಂಡದೊಂದಿಗೆ ಬೆಂಗಳೂರು ಬುಲ್ಸ್ ಸೆಣೆಸಾಡಲಿದ್ದು ಪಂದ್ಯಾವಳಿಗೆ ಆರಂಭ ಸಿಗಲಿದೆ.

ಎಲ್ಲ ಪಂದ್ಯಗಳು ಬೆಂಗಳೂರಿನ ವೈಟ್ ಫೀಲ್ಡ್ ಶೆರಾಟನ್ ಗ್ರ್ಯಾಂಡ್ ಹೋಟೆಲ್ ಮತ್ತು ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆಯಲಿವೆ.

ಆಯೋಜಕರು ಪಂದ್ಯಾವಳಿಯ ಮೊದಲ ವೇಳಾಪಟ್ಟಿ ಬಿಡುಗಡೆ ಮಾಡಿದ್ದು ಬೆಂಗಳೂರು ಬುಲ್ಸ್ ತಂಡ ಡಿಸೆಂಬರ್ ನಲ್ಲಿ 4 ಮತ್ತು ಜನವರಿಯಲ್ಲಿ 7 ಪಂದ್ಯಗಳು ಸೇರಿ ಮೊದಲಾರ್ಧದಲ್ಲಿ ಬುಲ್ಸ್ 11 ಪಂದ್ಯಗಳನ್ನು ಆಡಲಿದೆ.

ಬೆಂಗಳೂರು ಬುಲ್ಸ್ ಶಕ್ತಿ:

ಪ್ರೋ ಕಬಡ್ಡಿಯಲ್ಲಿ ಬೆಂಗಳೂರು ಬುಲ್ಸ್ ಸದಾ ಫೇವರೇಟ್ ತಂಡ.

ಜನವರಿ 2019 ರಲ್ಲಿ ನಡೆದ ಫೈನಲ್‍ನಲ್ಲಿ ಗುಜರಾತ್ ಫಾರ್ಚೂನ್ ಜೈಂಟ್ಸ್ ಅನ್ನು ಸೋಲಿಸುವ ಮೂಲಕ ಸೀಸನ್ 6 ರಲ್ಲಿ ಚಾಂಪಿಯನ್ ಆಗಿತ್ತು.

ಎರಡನೇ ಸೀಸನ್ ನಲ್ಲಿ ರನ್ನರ್ ಅಪ್ ಆಗಿದ್ದರೆ ಸೀಸನ್ 1 ಮತ್ತು 7 ರಲ್ಲಿ, ಸೆಮಿಫೈನಲ್ ಪ್ರವೇಶ ಮಾಡಿತ್ತು.

ಈ ಬಾರಿ ಅದ್ಭುತ ತಂಡ: ಕಳೆದ ಬಾರಿಗಿಂತ ಈ ಬಾರಿ ಬುಲ್ಸ್ ತಂಡ ಮತ್ತಷ್ಟು ಬಲಿಷ್ಠವಾಗಿದೆ.

ಬುಲ್ಸ್ ಅನುಭವಿ ಆಟಗಾರರನ್ನು ಉಳಿಸಿಕೊಳ್ಳುವುದರೊಂದಿಗೆ ವಿದೇಶಿ ಆಟಗಾರರ ಸೇರ್ಪಡೆ ಮಾಡಿಕೊಂಡಿದೆ.

ಅಬೋಲ್ಫಾಜ್ಲ್ ಮಗ್ಸೋಡ್ಲೌ ಮಹಾಲಿ (ಇರಾನ್), ಡಾಂಗ್ ಜಿಯೋನ್ ಲೀ (ದಕ್ಷಿಣ ಕೊರಿಯಾ), ಜಿಯಾವುರ್ ರೆಹಮಾನ್ (ಬಾಂಗ್ಲಾದೇಶ) ಆಟಗಾರರು ತಂಡ ಸೇರಿಕೊಂಡಿದ್ದಾರೆ.

ರೆಕಾರ್ಡ್ ಬ್ರೇಕಿಂಗ್ ರೈಡರ್ ಪವನ್ ಕುಮಾರ್ ಸೆಹ್ರಾವತ್ ನಾಯಕನಾಗಿ ಬುಲ್ಸ್ ತಂಡ ಮುನ್ನಡೆಸಲಿದ್ದಾರೆ.

ಮೂರನೇ ಸೀಸನ್ ನಿಂದ ಪವನ್ ಬೆಂಗಳೂರು ಬುಲ್ಸ್ ತಂಡದ ಪರವಾಗಿ ಆಡುತ್ತ ಬಂದಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿಯೂ ಪವನ್ ಹೆಸರು ಮಾಡಿದ್ದಾರೆ. ದಕ್ಷಿಣ ಏಷ್ಯಾದ ಕ್ರೀಡಾಕೂಟದಲ್ಲಿ ಭಾರತೀಯ ತಂಡದ ಭಾಗವಾಗಿ ಚಿನ್ನಕ್ಕೆ ಕೊರಳು ಒಡ್ಡಿದ್ದರು.

ಪ್ರೋ ಕಬಡ್ಡಿಸೀಸನ್ 6 ಮತ್ತು 7 ರಲ್ಲಿ ಕ್ರಮವಾಗಿ “ಅತ್ಯಂತ ಮೌಲ್ಯಯುತ ಆಟಗಾರ” ಮತ್ತು “ಅತ್ಯುತ್ತಮ ರೈಡರ್” ಪುರಸ್ಕಾರಕ್ಕೆ ಪಾತ್ರವಾಗಿದ್ದರು.

ಪ್ರೋ ಕಬಡ್ಡಿಯ ಅತ್ಯುತ್ತಮ ರೈಡರ್ ಗಳಲ್ಲಿ ಪವನ್ ಗೆ ಅಗ್ರಸ್ಥಾನವಿದೆ. ಇನ್ನು ಡಿಫೆಂಡರ್ ಮಹೇಂದರ್ ಸಿಂಗ್ ಬೆಂಗಳೂರು ಬುಲ್ಸ್ ಶಕ್ತಿ.

ಕೋಚ್ ರಣಧೀರ್ ಸಿಂಗ್ ಸೆಹ್ರಾವತ್ ಅವರಿಂದ “ಬುಲ್ಡೋಜರ್” ಎಂದೇ ಕರೆಸಿಕೊಳ್ಳುತ್ತಾರೆ.

ಅರ್ಜುನ ಪ್ರಶಸ್ತಿ ವಿಜೇತ ರಣಧೀರ್ ಲೀಗ್ ಆರಂಭದಿಂದಲೂ ಬುಲ್ಸ್ ತರಬೇತುದಾರರಾಗಿದ್ದವರು. ಅನೇಕ ಯುವ ಆಟಗಾರರನ್ನು ತಮ್ಮ ಗರಡಿಯಲ್ಲಿ ಪಳಗಿಸಿ ಪರಿಚಯಿಸಿದ್ದಾರೆ.

ಈ ಭಾರಿ ಬುಲ್ಸ್ ಗೆ ಅತ್ಯುತ್ತಮ ನಾಯಕ ಮತ್ತು ಅತ್ಯುತ್ತಮ ಕೋಚ್ ಸಂಯೋಜನೆ ಇದೆ. 2014 ರಲ್ಲಿ ಪ್ರಾರಂಭವಾದ ಪ್ರೋ ಕಬಡ್ಡಿ ಹೊಸ ಜನರನ್ನು ತನ್ನ ಕಡೆ ಸೆಳೆದುಕೊಂಡಿತು.

ಕಬಡ್ಡಿ ಆಸ್ವಾದಿಸುವವರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿತು. ಡಬ್ಲ್ಯುಎಲ್ ಲೀಗ್ ಪ್ರೈವೇಟ್ ಲಿಮಿಟೆಡ್ ಮಾಲೀಕತ್ವದ ಬುಲ್ಸ್, ಪ್ರೋ ಕಬಡ್ಡಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಲೇ ಬಂದಿದೆ.

ಈಗ ಮತ್ತೊಮ್ಮೆ ಅಭಿಮಾನಿಗಳು ತಮ್ಮ ನೆಚ್ಚಿನ ತಂಡ ಮತ್ತು ಆಟಗಾರರನ್ನು ಬರಮಾಡಿಕೊಳ್ಳಲು ಸಿದ್ಧರಾಗಿದ್ದಾರೆ.

 Pro Kabaddi saaksha tv

ಸುದೀಪ್ ಕೊಂಡಾಡಿದ ತಂಡ: ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಸುದೀಪ್ ತಂಡವನ್ನು ಹುರಿದುಂಬಿಸಿದ್ದಾರೆ. ‘ನಮ್ಮ ಊರು, ನಮ್ಮ ಆಟ, ನಮ್ಮ ಹುಡುಗರು, ನಮ್ಮ ಬುಲ್ಸ್’ ಎನ್ನುತ್ತ ಎಲ್ಲರೂ ಬೆಂಬಲ ನೀಡಲು ಕೇಳಿಕೊಂಡಿದ್ದಾರೆ.

ಪಕ್ಕಾ ಹಳ್ಳಿ ಸೊಗಡಿನಲ್ಲಿ ಎಂಟ್ರಿ ಕೊಡುವ ಕಿಚ್ಚ, ಸಖತ್ ಡೈಲಾಗ್ ಹೊಡೆದು ಬೆಂಗಳೂರು ಬುಲ್ಸ್ ತಂಡಕ್ಕೆ ಬೆಂಬಲ ನೀಡಿದ್ದಾರೆ. ಸುದೀಪ್ ಟ್ವಿಟ್ಟರ್ ನಲ್ಲಿ ಪ್ರೋಮೋ ಹಂಚಿಕೊಂಡಿದ್ದಾರೆ.

ಗುರಾಯ್ಸೋಕೆ ರೆಡಿಯಾಗಿದೆ ನಮ್ಮೂರ ಬುಲ್ಸ್.. ಸಪ್ರೋರ್ಟ್ ಮಾಡೋಕೆ ರೆಡಿಯಾಗಿ ಕಬಡ್ಡಿ ಫ್ಯಾನ್ಸ್.. ನಿಮ್ಮ ಜೊತೆ ಬೆಂಗಳೂರು ಬುಲ್ಸ್ ಟೀಮ್ ಗೆ ಬೆಂಬಲ ನೀಡೋಕೆ ನಾನೂ ಕೂಡ ಇರ್ತಿನಿ ಎಂದು ಸುದೀಪ್ ಹೇಳಿದ್ದಾರೆ.

ಬುಲ್ಸ್ ಟೈಟಲ್ ಪ್ರಾಯೋಜಕರಾಗಿ 1xಟಿeತಿs ಜವಾಬ್ದಾರಿ ತೆಗೆದುಕೊಂಡಿದ್ದರೆ, ಹರ್ಬಲೈಫ್ ನ್ಯೂಟ್ರೇಶನ್ ಜವಾಬ್ದಾರಿ ಹೊತ್ತುಕೊಂಡಿದೆ.

ನಿಪ್ಪಾನ್ ಪೇಂಟ್, ಬಿಗ್ ಎಫ್‍ಎಂ ಮತ್ತು ಪಿಕೆ ಕಾನ್ಷಿಯಸ್‍ನೆಸ್ ಕೂಡ ಬುಲ್ಸ್ ನೊಂದಿಗೆ ಬಾಂಧ್ಯವ್ಯ ಬೆಸೆದುಕೊಂಡಿವೆ.

ಕೊರೋನಾ ಕಾರಣಕ್ಕೆ ಪಂದ್ಯಾವಳಿ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶ ಇರುವಿದಿಲ್ಲ.

ಬೆಂಗಳೂರು ಬುಲ್ಸ್ ತಂಡ: ಪವನ್ ಕುಮಾರ್ ಸೆಹ್ರಾವತ್ (ನಾಯಕ), ಮಹೇಂದರ್ ಸಿಂಗ್ (ಉಪನಾಯಕ), ಅಬೋಲ್ಫಜಲ್ ಮಗ್ಸೋಡ್ಲೌ ಮಹಾಲಿ, ಡಾಂಗ್ ಜಿಯೋನ್ ಲೀ, ಜಿಯಾವುರ್ ರೆಹಮಾನ್, ಅಮಿತ್ ಶೆರಾನ್, ಸೌರಭ್ ನಂದಲ್, ಮೋಹಿತ್ ಸೆಹ್ರಾವತ್, ಚಂದ್ರನ್ ರಂಜಿತ್, ದೀಪಕ್ ನರ್ವಾಲ್ ಜಿಬಿ , ಮಯೂರ್ ಜಗನ್ನಾಥ್ ಕದಮ್, ವಿಕಾಸ್, ಭರತ್ ಹೂಡಾ, ಅಮನ್ ಅಂತಿಲ್, ನಸೀಬ್, ರೋಹಿತ್ ಕುಮಾರ್, ಅಂಕಿತ್, ರೋಹಿತ್ ಸಾಂಗ್ವಾನ್. ಕೋಚ್: ರಣಧೀರ್ ಸಿಂಗ್ ಸೆಹ್ರಾವತ್.

ಬೆಂಗಳೂರು ಬುಲ್ಸ್ ತಂಡದ ಮೊದಲಾರ್ಧದ ವೇಳಾಪಟ್ಟಿ

1. ಯು ಮುಂಬಾ ಡಿ. 22 ಬುಧವಾರ ಸಂಜೆ 7:30

2. ತಮಿಳ್ ತಲೈವಾಸ್ ಡಿ. 24ಶುಕ್ರವಾರ ರಾತ್ರಿ 8:30

3. ಬಂಗಾಲ್ ವಾರಿಯರ್ಸ್ ಡಿ. 26 ಭಾನುವಾರ ರಾತ್ರಿ 8:30

4. ಹರ್ಯಾಣ ಸ್ಟೀಲರ್ಸ್ ಡಿ. 30 ಗುರುವಾರ ರಾತ್ರಿ 8:30

5. ತೆಲುಗು ಟೈಟಾನ್ಸ್ ಜ. 1 ಶನಿವಾರ ರಾತ್ರಿ 8:30

6. ಪುಣೇರಿ ಪಲ್ಟಾನ್ ಜ. 2 ಭಾನುವಾರ ರಾತ್ರಿ 8:30

7 ಜೈಪುರ್ ಪಿಂಕ್ ಪ್ಯಾಂಥರ್ಸ್ ಜ. 6 ಗುರುವಾರ ರಾತ್ರಿ 8:30

8. ಯುಪಿ ಯೋದ್ಧಾ ಜ. 9 ಭಾನುವಾರ ರಾತ್ರಿ 8:30

9. ದಬಾಂಗ್ ಡೆಲ್ಲಿ ಜ. 12ಬುಧವಾರ ರಾತ್ರಿ 8:30

10. ಗುಜರಾತ್ ಜೈಂಟ್ಸ್ ಜ. 14ಶುಕ್ರವಾರ ರಾತ್ರಿ 8:30

11. ಪಾಟ್ನಾ ಪೈರೇಟ್ಸ್‍ಜ. 16ಭಾನುವಾರ ರಾತ್ರಿ 8:30

Tags: #Saaksha TVbangalore bullspro kabaddiSports
ShareTweetSendShare
Join us on:

Related Posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram