ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ hassan saaksha tv
ಹಾಸನ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಸನದಲ್ಲಿ ಅತಿಥಿ ಉಪನ್ಯಾಸಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಪ್ರತಿಭಟನೆ ಮೆರವಣಿಗೆ ಆರಂಭಿಸಿದ ಅತಿಥಿ ಉಪನ್ಯಾಸಕರು, ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಸೇವಾ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಕೆ ಆಗ್ರಹಿಸಿದ ಉಪನ್ಯಾಸಕರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ ಮಾಡಿದ್ದಾರೆ.
ಇನ್ನು ಪತ್ರಿಭಟನಾ ಮೆರವಣಿಗೆಯಲ್ಲಿ ನೂರಾರು ಅತಿಥಿ ಉಪನ್ಯಾಸಕರು ಭಾಗಿಯಾಗಿದ್ದರು.









