ನವದೆಹಲಿ : ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 87 ವರ್ಷದ ಮನಮೋಹನ್ ಸಿಂಗ್ ಎದೆನೋವು ಮತ್ತ ಜ್ವರ ಕಾಣಿಸಿಕೊಂಡ ಹಿನ್ನೆಲೆ ಭಾನುವಾರ ಸಂಜೆ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಇದೀಗ, ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದ ಕಾರಣ, ಅವರನ್ನು ಮನೆಗೆ ಕಳುಹಿಸಲಾಗಿದೆ. ಭಾನುವಾರದಿಂದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನ ಕಾರ್ಡಿಯೋ-ಥೊರಾಸಿಕ್ ಸೈನ್ಸಸ್ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ.
ಅಂದ್ಹಾಗೆ, ಮನಮೋಹನ್ ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದ ಕಾರಣ, ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ, ಅವರ ವರದಿ ನೆಗಿಟಿವ್ ಬಂದಿತ್ತು.








