ರಾಜ್ಯದಲ್ಲಿ ಇಂದು ಕೊರೊನಾ ಮಹಾಸ್ಫೋಟವಾಗಿದೆ. ಇಂದು ಬೆಳಿಗ್ಗೆ 42 ಹೊಸ ಕೊರೊನಾ ಕೇಸ್ ಪತ್ತೆಯಾಗಿದ್ದರೇ, ಸಂಜೆಯ ವೇಳೆಗೆ ಈ ಸಂಖ್ಯೆ 63ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದ್ದು, ಕೊರೊನಾ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬಾಗಲಕೋಟೆ 15, ದಾವಣಗೆರೆ 12, ಧಾರವಾಡ 9, ಹಾಸನ 5, ಕೋಲಾರ 5, ಬೆಂಗಳೂರು 4, ಗದಗ 3, ಯಾದಗಿರಿ 2, ಬೀದರ್ 2, ದಕ್ಷಿಣ ಕನ್ನಡ 2 ಕಲಬುರ್ಗಿ 1, ಚಿಕ್ಕಬಳ್ಳಾಪುರ 1, ಬಳ್ಳಾರಿ 1 ಮತ್ತು ಮಂಡ್ಯ 1 ಜನರಿಗೆ ಕೊರೊನಾ ಸೋಂಕಿರುವುದು ಪತ್ತೆಯಾಗಿದೆ. ಈ ಮೂಲಕ ಇಂದು ದಾಖಲೆಯ 63 ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗುವ ಮೂಲಕ, ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.
ಇನ್ನೂ ಕಿಲ್ಲರ್ ವೈರಸ್ ಗೆ ಇದುವರೆಗೆ 31 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ. ಸೋಂಕಿತರಾದಂತ 433 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.








