ಕಳೆದ ಮೂರು ವರ್ಷಗಳಲ್ಲಿ 1 ಲಕ್ಷಕ್ಕೂ ಅಧಿಕ ಮಂದಿಗೆ ಉದ್ಯೋಗಾವಕಾಶ : ಮುರುಗೇಶ್ ನಿರಾಣಿ Murugesh Nirani saaksha tv
ಬೆಳಗಾವಿ : ಕಳೆದ ಮೂರು ವರ್ಷಗಳಲ್ಲಿ 95 ಬೃಹತ್ ಕೈಗಾರಿಕೆಗಳು ಆರಂಭಗೊಂಡಿದೆ. ಇವುಗಳಿಂದ 25 ಸಾವಿರಕ್ಕೂ ಅಧಿಕ ಕೋಟಿ ರೂಪಾಯಿ ಬಂಡವಾಳ ಹರಿದುಬಂದಿದ್ದು ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಉದ್ಯೋಗಾವಕಾಶ ದೊರೆತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಾಹಿತಿ ನೀಡಿದ್ದಾರೆ.
ವಿಧಾನಪರಿಷತ್ ನಲ್ಲಿ ಯು ಬಿ ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿ ಮುರುಗೇಶ್ ನಿರಾಣಿ, ರಾಜ್ಯದಲ್ಲಿ ಉದ್ಯೋಗ ಸ್ನೇಹಿ ವಾತಾವರಣ ನಿರ್ಮಿಸಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ. ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ ಯೋಜನೆಯಡಿ ಕೈಗಾರಿಕೆಗಳಿಗೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.
ಅಲ್ಲದೇ ಗ್ರಾಮೀಣ ಭಾಗದಲ್ಲಿ ಅಗತ್ಯವಿರುವ ಬಹುತೇಕ ವಸ್ತುಗಳನ್ನು ನಾವೇ ಉತ್ಪಾದಿಸುತ್ತಿದ್ದು, ಕೈಗಾರಿಕೆಗಳಿಗೆ ಸ್ವಯಂ ಘೋಷಣಾ ಪತ್ರದಡಿ ಪರವಾನಗಿ ನೀಡುವ ವ್ಯವಸ್ಥೆ ಮಾಡಲಾಗಿದೆ. ವಾಣಿಜ್ಯ ಉತ್ಪಾದನೆ ಆರಂಭವಾದ ನಂತರ ಮೂರು ವರ್ಷಗಳ ಬಳಿಕ ಅಗತ್ಯ ಪರವಾನಗಿಗಳನ್ನು ಪಡೆಯಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.