ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನು ಜಾರಿಗೆ ತರಲಿ : ಇಬ್ರಾಹಿಂ cm-ibrahim saaksha tv
ಬೆಳಗಾವಿ : ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನೂ ಜಾರಿಗೆ ತರಲಿ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಇಂದು ವಿಧಾನ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಿದೆ.
ಇದಕ್ಕೆ ಸಿ.ಎಂ.ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದು, ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನೂ ಜಾರಿಗೆ ತರಲಿ ಎಂದು ಟಾಂಗ್ ನೀಡಿದ್ದಾರೆ.
ಅಲ್ಲದೇ ಹೊರಗಿಂದ ಬಂದು ಪಕ್ಷ ಸೇರಿದವರು ಆರು ತಿಂಗಳು ಮಂತ್ರಿಗಳಾಗುವಂತಿಲ್ಲ ಅಂತ ಕಾನೂನು ತರಲಿ ಎಂದು ಬಿಜೆಪಿಗೆ ಸೇರಿದ ವಲಸಿಗರಿಗೆ ಟಾಂಗ್ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಮತಾಂತರ ನಿಷೇಧ ಕಾನೂನಿಗೆ ವಿರೋಧ ಇದ್ದು, ಪರಿಷತ್ ನಲ್ಲಿ ಮಸೂದೆ ಮಂಡಿಸಿದರೆ ಬೇಡ ಎಂದು ವಿರೋಧಿಸುತ್ತೇವೆ ಎಂದು ತಿಳಿಸಿದರು.
ಇದೇ ವೇಳೆ ಬಿಜೆಪಿಗರನ್ನು ದಾರಿ ತಪ್ಪಿದ ಮಕ್ಕಳು ಎಂದ ಇಬ್ರಾಹಿಂ, ಮತಾಂತರ ತಡೆ ಮಸೂದೆ ತರುವ ಮುನ್ನ ವಿದೇಶಿ ಕನ್ನಡಿಗರ ಬಗ್ಗೆಯೂ ಸರ್ಕಾರ ಯೋಚಿಸಲಿ.
ಇಲ್ಲಿ ಆ ಕಾಯ್ದೆ ತಂದರೆ ವಿದೇಶಗಳಲ್ಲಿ ಕನ್ನಡಿಗರು ನೆಮ್ಮದಿಯಾಗಿ ಇರಲು ಸಾಧ್ಯವೇ ಎಂದು ಪ್ರಶ್ನಿಸಿದರು.









