ಪ್ರಿಯಾಂಕಾ ಗಾಂಧಿ ಮಕ್ಕಳ Instagram ಖಾತೆ ಹ್ಯಾಕ್ ಆಗಿದೆಯಂತೆ…!
ನವದೆಹಲಿ : ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ತಮ್ಮ ಮಕ್ಕಳ Instagram ಖಾತೆ ಹ್ಯಾಕ್ ಆಗಿದೆಯೆಂದು ಹೇಳಿಕೊಂಡಿದ್ದಾರೆ. ಮಹಿಳಾ ಸಬಲೀಕರಣಕ್ಕಾಗಿ ಮೀಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಅವರ ಪ್ರಯಾಗ್‍ರಾಜ್ ಭೇಟಿಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ವಿರುದ್ಧವಾಗಿ ಆರೋಪ ಮಾಡಿದ್ದಾರೆ.
ಉತ್ತರ ಪ್ರದೇಶ ಸರ್ಕಾರ ಏನು ಮಾಡುತ್ತಿದೆ. ಜನರ ಸಮಸ್ಯೆ ಪರಿಹಾರ ಮಾಡುತ್ತಿಲ್ಲ, ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ಪ್ರತಿಪಕ್ಷಗಳ ಫೋನ್ ಕದ್ದಾಲಿಕೆಯಂತ ಕೆಲಸದಲ್ಲಿ ತೊಡಗಿಕೊಂಡಿದೆ. ನನ್ನ ಮಕ್ಕಳ ಇನ್‍ಸ್ಟಾಗ್ರಾಮ್ ಖಾತೆ ಹ್ಯಾಕ್ ಎಂದು ಕಿಡಿಕಾರಿದ್ದಾರೆ.








