ಕಾಂಗ್ರೆಸ್ ಪಾದಯಾತ್ರೆ ಪಕ್ಷದ ಕಾರ್ಯಕ್ರಮವಲ್ಲ.. ಜನಪರ ಹೋರಾಟ : ಸಿದ್ದರಾಮಯ್ಯ Siddaramaiah saaksha tv
ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಯಲಿರುವ ಪಾದಯಾತ್ರೆ ಪಕ್ಷದ ಕಾರ್ಯಕ್ರಮವಲ್ಲ, ರಾಜ್ಯದ ಹಿತದೃಷ್ಟಿಯಿಂದ ರೂಪಿಸಿರುವ ಜನಪರ ಹೋರಾಟ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪಾದಯಾತ್ರೆ ಬಗ್ಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಇದ್ದಿದ್ದರೆ ‘ಮೇಕೆದಾಟು ಯೋಜನೆ’ ಈಗಾಗಲೇ ಆರಂಭ ಮಾಡಿರುತ್ತಿದ್ದೆವು. ಆದರೆ ಈ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ. ಆದ್ದರಿಂದ ಈ ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಜನವರಿ 9ರಿಂದ 19ರ ವರೆಗೆ ಪಾದಯಾತ್ರೆ ನಡೆಸಲಿದೆ. ಇದು ಪಕ್ಷದ ಕಾರ್ಯಕ್ರಮವಲ್ಲ, ರಾಜ್ಯದ ಹಿತದೃಷ್ಟಿಯಿಂದ ರೂಪಿಸಿರುವ ಜನಪರ ಹೋರಾಟ ಎಂದು ತಿಳಿಸಿದ್ದಾರೆ.
ಇನ್ನು ‘ಮೇಕೆದಾಟು’ ಬೆಂಗಳೂರು ನಗರ, ಸುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವದ ಯೋಜನೆ. ಈ ಯೋಜನೆ ಜಾರಿಯಾದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಸೇರಿ ಚಿಕ್ಕಬಳ್ಳಾಪುರ, ಕೋಲಾರದ ಜನರಿಗೆ ಕುಡಿಯುವ ನೀರು ಸಿಗಲಿದೆ. ಈ ಯೋಜನೆಯಿಂದ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ ಅನುಕೂಲ ಆಗಲಿದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.








