ಧಗ ಧಗನೆ ಹೊತ್ತಿ ಉರಿದ ಶಾಲಾ ಬಸ್ mysore saaksha tv
ಮೈಸೂರು : ಶಾಲಾ ವಾಹನವೊಂದು ನಿಂತಲ್ಲಿಯೇ ಹೊತ್ತಿ ಉರಿದಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣದ ಡಿಟಿಎಂಎನ್ ಶಾಲೆಯಲ್ಲಿ ನಡೆದಿದೆ. ಅದೃಷ್ಠವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದ ಬಸ್ ಚಾಲಕ ಮಕ್ಕಳನ್ನು ಶಾಲೆಗೆ ಕಳುಹಿಸಿದ ಕಲವೇ ಕ್ಷಣಗಳಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದ್ದಂತೆ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಕೂಡಲೇ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.









