ಸಿ ಎಂ ಪ್ರತಿಕೃತಿ ದಹನ. ಮತ್ತೆ ಕನ್ನಡ ಧ್ವಜಕ್ಕೆ ಬೆಂಕಿ – ಮಿತಿ ಮೀರಿದ ಶಿವಸೇನೆ ಪುಂಡಾಟಿಕೆ.
ಬೆಳಗಾವಿ: ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರ ಹಾವಳಿ ರಾಜ್ಯದಲ್ಲಿ ಮತ್ತೆ ಎಲ್ಲೆ ಮೀರುತ್ತಿದೆ. ಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ಮಾಡಿ ಮತ್ತೊಮ್ಮೆ ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟಿದ್ದಾರೆ.
ಬೆಳಗಾವಿ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆಯ ಮುಖಂಡ ಚಂದ್ರಕಾಂತ ಮೈಗುರೆ ನೇತೃತ್ವದಲ್ಲಿ ಈ ರೀತಿ ಪುಂಡಾಟ ನಡೆಸಿದ್ದಾರೆ.
ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನ ಬಂಧ್ ಮಾಡಬೇಕು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಡಿ.31ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಕೆಲ ದಿನಗಳ ಹಿಂದೆ ಖಾನಾಪುರದ ಹಲಸಿ ಗ್ರಾಮದಲ್ಲಿ ಬಸವಣ್ಣನವರ ಪ್ರತಿಮೆಗೆ ಸಗಣಿ ಎರಚಿ ಧ್ವಜ ಕಿತ್ತೆಸದಿಂದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120Bರಡಿ ಕೇಸ್ ದಾಖಲಾಗಿದೆ.








