ಮುಂದಿನ ಚುನಾವಣೆವರೆಗೂ ಬೊಮ್ಮಾಯಿ ಅವರೇ ಸಿಎಂ : ಜೋಶಿ Bommai saaksha tv
ನವದೆಹಲಿ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಿಎಂ ಬದಲಾವಣೆ ಮಾತು ಆಗಾಗ ಕೇಳಿಬರುತ್ತಲೇ ಇರುತ್ತದೆ. ಇದೀಗ ಬೊಮ್ಮಾಯಿ ವಿಚಾರದಲ್ಲೂ ಅದೇ ಆಗುತ್ತಿದ್ದು, ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಮುಂದಿನ ಚುನಾವಣೆವರೆಗೂ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.
ಇದರಲ್ಲಿ ಯಾವುದೇ ಅನುಮಾನಗಳಿಲ್ಲ. ಕೇಂದ್ರದ ಮಟ್ಟದಲ್ಲೂ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಆ ಪ್ರಸ್ತಾಪವೂ ನಮ್ಮಲ್ಲಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಬೊಮ್ಮಾಯಿ ಅವರು ಶಿಗ್ಗಾಂವ್ ನಲ್ಲಿ ಮಾತನಾಡಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ. ಅವರು ಹೀಗೆ ಫಿಲಾಸಫಿಕಲ್ ಆಗಿ ಮಾತನಾಡಿದ್ದಾರೆ. ಇದನ್ನು ನಾನೇ ಹತ್ತಾರು ಬಾರಿ ನೋಡಿದ್ದೇನೆ ಎಂದು ಹೇಳಿದರು.









