ಡಿ ಬಾಸ್ ‘’ಕ್ರಾಂತಿ’ಯಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್..!
ರಾಬರ್ಟ್ ಸಿನಿಮಾದ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಕ್ರಾಂತಿ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ..
ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.. ಇದೀಗ ಹೊಸದೊಂದು ಸುದ್ದಿ ಹಬ್ಬಿದೆ..
ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ರವಿಚಂದ್ರನ್ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ತಿದ್ದಾರೆ ಎನ್ನಲಾಗಿದೆ..
ರವಿಚಂದ್ರನ್ ಅವರು ಮುಹೂರ್ತ ಕಾರ್ಯಕ್ರಮದಲ್ಲಿಯೂ ಭಾಗವಹಿಸಿದ್ದರು.
ಈ ಹಿಂದೆ ಕುರುಕ್ಷೇತ್ರ ಸಿನಿಮಾದಲ್ಲಿ ದರ್ಶನ್ ಜೊತೆಗೆ ರವಿಚಂದ್ರನ್ ತೆರೆಹಂಚಿಕೊಂಡಿದ್ದರು..
ಆ ಸಿನಿಮಾದಲ್ಲಿ ಕೃಷ್ಣನ ಪಾತ್ರದಲ್ಲಿ ನಟಿಸಿದ್ದರು. ಅಷ್ಟೇ ಅಲ್ಲದೇ ರವಿಚಂದ್ರನ್ ಅವರ ಜೊತೆಗೆ ಸ್ಯಾoಡಲ್ ವುಡ್ ನ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಸಹ ನಟಿಸುತ್ತಿದ್ದಾರೆ ಎನ್ನಲಾಗಿದೆ..
ಅಂದ್ಹಾಗೆ ಕ್ರಾಂತಿ ಸಿನಿಮಾಗೂ ಮುನ್ನ ದರ್ಶನ್ ರಾಜವೀರ ಮದಕರಿ ನಾಯಕ ಸಿನಿಮಾದಲ್ಲಿ ನಟಿಸುತ್ತಿದ್ದರು.
ಈ ಸಿನಿಮಾವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿದ್ದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿದ್ದರು.
ಆದರೆ ಆ ಸಿನಿಮಾದ ಚಿತ್ರೀಕರಣ ಅರ್ಧಕ್ಕೆ ನಿಂತು ಹೋಗಿದೆ. ಕೆಲ ಕಾರಣಗಳಿಂದ ದರ್ಶನ್ ಅವರೇ ಸಿನಿಮಾವನ್ನು ತಡೆಹಿಡಿದಿದ್ದಾರೆ ಎನ್ನಲಾಗುತ್ತಿದೆ.
ಇದರ ಶೂಟಿಂಗ್ ಯಾವಾಗ ಶುರುವಾಗಲಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ..









