ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ : ಸ್ಥಳೀಯ ಮುಖಂಡರು ಹೇಳಿದ್ದೇನು..? Siddaramaiah saaksha tv
ಕೋಲಾರ : ಒಂದು ವೇಳೆ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ದೆ ಮಾಡಿದರೆ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಸ್ವಾಗತ ಕೋರುವುದಾಗಿ ಜಿಲ್ಲಾ ಅಲ್ಪಸಂಖ್ಯಾತ ಸಮುದಾಯದ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಅಲ್ಪಸಂಖ್ಯಾತ ಸಮುದಾಯದ ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಸ್ಥಳೀಯ ಅಲ್ಪಸಂಖ್ಯಾತ ಸಮುದಾಯದ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.
ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಮಾತನಾಡಿದ ಮುಖಂಡರು ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಎರಡು ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರೊಬ್ಬರು ಅಯ್ಕೆಯಾಗಲು ಇರುವ ಏಕೈಕ ಕ್ಷೇತ್ರ ಕೋಲಾರ ವಿಧಾನಸಭಾ ಕ್ಷೇತ್ರ ಮಾತ್ರ, ಹೀಗಾಗಿ ಕಾಂಗ್ರೆಸ್ ಪಕ್ಷದಿಂದ ಸ್ಥಳೀಯ ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವಂತೆ ಒತ್ತಾಯಿಸಿದರು.
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ 40 ಸಾವಿರಕ್ಕೂ ಹೆಚ್ಚು ಸಮುದಾಯದ ಜನರು ಇದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲಕರ ವಾತಾವರಣ ಇರುವುದರಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದ್ರೆ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕಾಂಗ್ರೆಸ್ ಮುಖಂಡ ನಜೀರ್ ಸಾಬ್ ಹೇಳಿದರು.
ಇನ್ನೂ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ನಗರಸಭೆ ಸದಸ್ಯ ಸಲ್ಲವುದ್ದಿನ್ ಬಾಬು ಮಾತನಾಡಿ, ಎರಡು ಜಿಲ್ಲೆಗಳ 11 ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ಸಿಕ್ಕಿದು ಕಡಿಮೆ, ಕಳೆದ ಎರಡು ಬಾರಿ ಕೋಲಾರ ಕ್ಷೇತ್ರದಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಟ್ಟರು ಹಲವಾರು ಕಾರಣಗಳಿಂದ ಸೋಲು ಅನುಭವಿಸಬೇಕಾಯಿತು. ಆದ್ರೆ ಈ ಭಾರಿ ಕ್ಷೇತ್ರದ ಪರಿಸ್ಥಿತಿ ಅನುಕೂಲಕರ ವಾಗಿದ್ದು ಸ್ಥಳೀಯ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು, ಪ್ರತಿ ಚುನಾವಣೆಯಲ್ಲಿ ಕ್ಷೇತ್ರದ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಬೆಂಬಲ ನೀಡಿದ್ದಾರೆ, ಇದನ್ನು ಮನಗಂಡ ಪಕ್ಷದ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಅಲ್ಪಸಂಖ್ಯಾತ ಸಮುದಾಯಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.









