ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ ವಿ ರಾಜು ಇನ್ನಿಲ್ಲ……
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಅವರು ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದ ತಮ್ಮ ನಿವಾಸದಲ್ಲಿ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆಯುತ್ತಿದ್ದ ಕೆವಿ ರಾಜು ಅವರು ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ವಿಧಿವಶರಾಗಿದ್ದಾರೆ.
ಕೆವಿ ರಾಜು ಅವರು ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು. ಅಲ್ಲದೆ ಹಲವು ಸಿನಿಮಾಗಳಿಗೆ ಚಿತ್ರ ಕಥೆಯನ್ನೂ ಸಹ ಬರೆದಿದ್ದದಾರೆ. ಬಾಲಿವುಡ್ ನ ಅಮಿತಾಭ್ ಬಚ್ಚನ್ ಅವರಿಗೂ ನಿರ್ದೇಶನ ಮಾಡಿದ ಖ್ಯಾತಿ ಇವರಿಗಿದೆ.
ರಾಜಾಜಿನಗರದ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಹರಿಶ್ಚಂದ್ರ ಘಾಟ್‌ನಲ್ಲಿ ಅಂತಿಮ ವಿದಿವಿಧಾನಗಳು ನೆರವೇರಲಿವೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಹಿರಿಯ ನಿರ್ದೇಶಕರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದ್ದಿದಾರೆ.