ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಮೂವರ ಸಾವು…
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ನಡೆದಿದೆ. ಹೊನ್ನಳಿ ತಾಲೋಕಿನ ತಕ್ಕನಹಳ್ಳಿಯಲ್ಲಿ ಮುಖ್ಯ ರಸ್ತೆಯ ಬೆಳಿ ಈ ಅಫಘಾತ ಸಂಂಭವಿಸಿದ್ದು ಮೂವರು ಸಾವನ್ನಪ್ಪಿದ್ದು ಓರ್ವ ಚಿಂತಾಜನಕ ಸ್ಥಿತಿಯಲ್ಲಿದ್ದಾನೆ.
ಕೋಟೆಹಾಳ್ ಗ್ರಾಮದ ಮಹೇಶಪ್ಪ, ಸಂಜು ಮತ್ತು ದಿಗಡೂರು ಗ್ರಾಮದ ಪ್ರಶಾಂತ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಆನಂದ ಎಂಬ ವ್ಯಕ್ತಿ ತೀವ್ರ ಗಾಯಗೊಂಡಿದ್ದರಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಂದು ಬೈಕ್ನಲ್ಲಿದ್ದವರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.








