ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು : ಸಿದ್ದರಾಮಯ್ಯ AntiConversionBill
ಬೆಂಗಳೂರು : ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ತರುವ ಬಗ್ಗೆ ಚರ್ಚೆ ನಡೆದಿತ್ತು ಎಂಬ ವಿಚಾರವಾಗಿ ಸದನದಲ್ಲಿ ಬಿಜೆಪಿಗರು ಸಾಬೀತು ಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಗಳ ಮೂಲಕ ಸ್ಪಷ್ಟನೆ ಕೊಟ್ಟಿರುವ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡು ಕಾಯ್ದೆ ರೂಪಿಸುವಂತೆ ಕಾನೂನು ಆಯೋಗಕ್ಕೆ ಮನವಿ ನೀಡಿತ್ತು. ನಮ್ಮ ಸರ್ಕಾರ ಆ ಕರಡನ್ನು ತಿರಸ್ಕರಿಸಿತ್ತು. ಈಗ ಮತ್ತೆ ಬಿಜೆಪಿ ಅದಕ್ಕೆ ಜೀವ ನೀಡುತ್ತಿದೆ.
ಕಾನೂನು ಆಯೋಗಕ್ಕೆ ಮನವಿ ನೀಡಿದ್ದ ಆರ್ ಎಸ್ ಎಸ್ ಬೆಂಬಲಿಗರ ತಂಡದಲ್ಲಿ ಚಿದಾನಂದ ಮೂರ್ತಿ, ನರಹರಿ, ಬಿ.ಎನ್ ಮೂರ್ತಿ, ಜೈದೇವ್, ಆರ್.ಲೀಲಾ, ಮತ್ತೂರ್ ಕೃಷ್ಣಮೂರ್ತಿ ಇದ್ದರು. ನಮ್ಮ ಸರ್ಕಾರದ ಕಾಲದಲ್ಲಿ ಕಾನೂನು ಇಲಾಖೆಯ ಕೈ ಸೇರಿದ್ದ ಕರಡು ಕಾನೂನನ್ನು 2015ರಲ್ಲಿಯೇ ತಿರಸ್ಕರಿಸಿದ್ದೆವು.
ತಿರಸ್ಕೃತಗೊಂಡ ಕರಡು ಕಾಯ್ದೆ ನಮ್ಮ ಸರ್ಕಾರದ ಕಾಲಾವಧಿಯಲ್ಲಿ ಮತ್ತೆಂದೂ ಚರ್ಚೆಗೆ ಬರಲಿಲ್ಲ. ನಮಗೆ ಇಂಥದ್ದೊಂದು ಕಾಯ್ದೆ ತರುವ ಬಗ್ಗೆ ಕಾಳಜಿ ಇದ್ದಿದ್ದರೆ 2015ರ ನವೆಂಬರ್ ನಲ್ಲಿ ಸಹಿ ಹಾಕಿ ಸಂಪುಟ ಚರ್ಚೆಗೆ ಕಳುಹಿಸಿದ್ದ ಕಡತ, ತಿರಸ್ಕಾರಗೊಂಡ ನಂತರದ ಎರಡೂವರೆ ವರ್ಷದ ಅವಧಿಯಲ್ಲಿ ಒಮ್ಮೆಯಾದರೂ ಅದರೆಡೆಗೆ ಗಮನ ನೀಡುತ್ತಿದ್ದೆವಲ್ಲವೇ? 7/10
— Siddaramaiah (@siddaramaiah) December 23, 2021
ಕರಡನ್ನು ನಾವು ಸಚಿವ ಸಂಪುಟದ ಮುಂದಿಟ್ಟು ಚರ್ಚೆ ಮಾಡಿಲ್ಲ, ಅನುಮೋದನೆಯನ್ನೂ ನೀಡಿಲ್ಲ. ಮುಖ್ಯಮಂತ್ರಿ ಈ ರೀತಿ ಸಂಪುಟ ಚರ್ಚೆಗೆ ತನ್ನಿ ಎಂದ ಅನೇಕ ವಿಷಯಗಳು, ಕಡತಗಳು ತಿರಸ್ಕರಿಸಲ್ಪಟ್ಟಿವೆ, ಕೆಲವು ಮುಂದೂಡಲ್ಪಟ್ಟಿವೆ, ಇನ್ನು ಕೆಲವು ಸಂಪುಟ ಉಪ ಸಮಿತಿಗೆ ಹೋಗಿವೆ.
ಈ ಹಿಂದಿನ ಕರಡು ಪ್ರತಿಗೂ, ಈಗಿನ ಕರಡು ಮಸೂದೆಗೂ ಬಹಳಷ್ಟು ವ್ಯತ್ಯಾಸಗಳಿವೆ. ಮದುವೆ ಎಂಬ ಪದ ಹೊಸದಾಗಿ ಸೇರಿಸಲಾಗಿದೆ, ಸಾಕ್ಷಾಧಾರ ಕೊರತೆ ಎದುರಾದಾಗ ದೂರುದಾರರಿಗೆ ಅನುಕೂಲವಾಗುವಂತೆ ನಿಯಮ ರೂಪಿಸಲಾಗಿದೆ.
ಸಾಮಾನ್ಯರ ವ್ಯಕ್ತಿ ಮತಾಂತರವಾದಾಗ ಒಂದು ಶಿಕ್ಷೆ, ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಅಪ್ರಾಪ್ತರು, ಬುದ್ದಿಭ್ರಮಣೆಯಾದವರನ್ನು ಮತಾಂತರ ಮಾಡಿದಾಗ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಆದರೆ ಇಂತಹುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಕಾನೂನಿನ ಎದುರು ಸರ್ವರೂ ಸಮಾನರು.
ಈ ಹಿಂದಿನ ಕರಡು ಪ್ರತಿಗೂ, ಈಗಿನ ಕರಡು ಮಸೂದೆಗೂ ಬಹಳಷ್ಟು ವ್ಯತ್ಯಾಸಗಳಿವೆ. ಮದುವೆ ಎಂಬ ಪದ ಹೊಸದಾಗಿ ಸೇರಿಸಲಾಗಿದೆ, ಸಾಕ್ಷಾಧಾರ ಕೊರತೆ ಎದುರಾದಾಗ ದೂರುದಾರರಿಗೆ ಅನುಕೂಲವಾಗುವಂತೆ ನಿಯಮ ರೂಪಿಸಲಾಗಿದೆ. 4/10#AntiConversionBill
— Siddaramaiah (@siddaramaiah) December 23, 2021
ತಿರಸ್ಕೃತಗೊಂಡ ಕರಡು ಕಾಯ್ದೆ ನಮ್ಮ ಸರ್ಕಾರದ ಕಾಲಾವಧಿಯಲ್ಲಿ ಮತ್ತೆಂದೂ ಚರ್ಚೆಗೆ ಬರಲಿಲ್ಲ. ನಮಗೆ ಇಂಥದ್ದೊಂದು ಕಾಯ್ದೆ ತರುವ ಬಗ್ಗೆ ಕಾಳಜಿ ಇದ್ದಿದ್ದರೆ 2015ರ ನವೆಂಬರ್ ನಲ್ಲಿ ಸಹಿ ಹಾಕಿ ಸಂಪುಟ ಚರ್ಚೆಗೆ ಕಳುಹಿಸಿದ್ದ ಕಡತ, ತಿರಸ್ಕಾರಗೊಂಡ ನಂತರದ ಎರಡೂವರೆ ವರ್ಷದ ಅವಧಿಯಲ್ಲಿ ಒಮ್ಮೆಯಾದರೂ ಅದರೆಡೆಗೆ ಗಮನ ನೀಡುತ್ತಿದ್ದೆವಲ್ಲವೇ?
ಮತಾಂತರ ನಿಷೇಧ ಕಾಯ್ದೆ ಆರ್ ಎಸ್ ಎಸ್ ಕೈವಾಡದಿಂದ ರೂಪುಗೊಂಡಿದ್ದರಲ್ಲಿ ಅನುಮಾನವೇ ಇಲ್ಲ. ಗುಜರಾತ್, ಉತ್ತರ ಪ್ರದೇಶ ಮತ್ತು ಕರ್ನಾಟಕ ಎಲ್ಲಾ ರಾಜ್ಯಗಳ ಕಾನೂನು ಒಂದೇ ರೀತಿಯ ಪದಬಳಕೆಯಿಂದ ಕೂಡಿದೆ. ಒಬ್ಬರೇ ಮೂರೂ ಕರಡು ಕಾಯ್ದೆಗಳನ್ನು ತಯಾರು ಮಾಡಿದಂತಿದೆ.
ನಾವು ಸಂವಿಧಾನದ ಆಶಯಕ್ಕನುಗುಣವಾಗಿ ಕಾಯ್ದೆಯನ್ನು ವಿರೋಧ ಮಾಡಿದ್ದೇವೆ. ಯಾರ ಪರ-ವಿರೋಧವೂ ಇಲ್ಲ. ಇದು ಒಂದೆರಡು ಧರ್ಮಗಳನ್ನು ಗುರಿಯಾಗಿರಿಸಿರುವ ಕಾನೂನು ಎಂದು ವಿವರಣೆ ನೀಡಿದ್ದಾರೆ.








