ಡಿಸೆಂಬರ್ 30 ರಿಂದಲೇ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಸಾಧ್ಯತೆ
ಬೆಂಗಳೂರು : ಒಮಿಕ್ರಾನ್ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಈ ಮಧ್ಯೆ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಹಾಕುವ ಹಿನ್ನೆಲೆಯಲ್ಲಿ ಡಿಸೆಂಬರ್ 30.31 , 01 ರ ತನಕ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಹೊಸ ವರ್ಷಾಚರಣೆ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.
ಅಲ್ಲದೇ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಗೈಡ್ ಲೈನ್ ನೀಡಿದ್ದಾರೆ.
ಆದರಂತೆ ಎಲ್ಲವೂ ನಡೆಯಲಿದೆ. ಪಬ್ ರೆಸ್ಟೋರೆಂಟ್ ಗಳಲ್ಲಿ ಶೇಕಡಾ 50 ರಷ್ಟು ಅವಕಾಶ ಇರುತ್ತೆ.
ಯಾವುದೇ ವಿಶೇಷ ಕಾರ್ಯಕ್ರಮಗಳು ಆಯೋಜನೆ ಮಾಡುವಂತಿಲ್ಲ ಎಂದು ತಿಳಿಸಿದರು.
ಇನ್ನು ಕಳೆದ ವರ್ಷದಂತೆ ಈ ಬಾರಿಯೂ ಪೊಲೀಸ್ ಇಲಾಖೆ ಕಾರ್ಯ ನಿರ್ವಹಿಸಲಿದೆ.
ಅನಾವಶ್ಯಕ ಓಡಾಟ ಸುತ್ತಾಟಕ್ಕೆ ನಗರದಲ್ಲಿ ಅವಕಾಶ ಇರಲ್ಲ. ಪೊಲೀಸ್ ಇಲಾಖೆ ಕಳೆದ ಬಾರಿಯಂತೆ ಈ ಬಾರಿಯೂ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.