ಗುಡ್ ನ್ಯೂಸ್ | ರೋಹಿತ್ ಶರ್ಮಾ ಫಿಟ್.. ಆಫ್ರಿಕಾ ಟೂರಿಗೆ ರೆಡಿ Rohit Sharma saaksha tv
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಭಾರತೀಯ ಅಭಿಮಾನಿಗಳಿಗೆ ಸಂತಸದ ಸುದ್ದಿ. ಗಾಯದ ಸಮಸ್ಯೆಯಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯ ಸರಣಿಗೆ ಲಭ್ಯರಾಗಲಿದ್ದಾರೆ.
ಈಗಾಗಲೇ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿರುವ ರೋಹಿತ್ ಪ್ರಾಥಮಿಕ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ವರದಿಯಾಗಿದೆ. ಸೋಮವಾರ, ರೋಹಿತ್ ಮತ್ತೊಮ್ಮೆ ಫಿಟ್ನೆಸ್ ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪರೀಕ್ಷೆಯಲ್ಲಿ ರೋಹಿತ್ ಪಾಸ್ ಆದರೇ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಲಭ್ಯರಾಗಲಿದ್ದಾರೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ಭಾರತ ತಂಡ ಕೊಹ್ಲಿಯನ್ನು ತೆಗೆದು ರೋಹಿತ್ ಅವರನ್ನು ಏಕದಿನ ನಾಯಕರನ್ನಾಗಿ ನೇಮಿಸಿತ್ತು.
“ರೋಹಿತ್ ಸಂಪೂರ್ಣ ಫಿಟ್ ಆಗಿದ್ದಾರೆ. ಅವರು ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ರೋಹಿತ್ ಪ್ರಾಥಮಿಕ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಅವರು ಇನ್ನೂ ಎನ್‌ಸಿಎಯಲ್ಲಿದ್ದು, ರೋಹಿತ್ ಸೋಮವಾರ ಮತ್ತೊಂದು ಫಿಟ್‌ನೆಸ್ ಪರೀಕ್ಷೆಯಲ್ಲಿ ಭಾಗಿಯಾಗಲಿದ್ದಾರೆ. ಈ ಪರೀಕ್ಷೆಯ ಆಧಾರದ ಮೇಲೆ ನಾವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ,” NCA ಅಧಿಕಾರಿಯೊಬ್ಬರು ಹೇಳಿದ್ದಾರೆ.









