ಒಂದು ದಿನ ಬಂದ್ ಮಾಡಿದ್ರೆ ತಪ್ಪೇನು ಆಗಲ್ಲ : ಕುಮಾರಸ್ವಾಮಿ karnataka bandh saaksha tv
ಹಾಸನ : ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಈ ಬಂದ್ ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದರೇ ಅದೇ ಪಕ್ಷದ ವರಿಷ್ಠ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬೇರೆಯದ್ದೇ ಕಥೆ ಹೇಳಿದ್ದಾರೆ.
ಬಂದ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಹೆಚ್ ಡಿ ಕುಮಾರಸ್ವಾಮಿ, ಈ ಬಂದ್ ನಿಂದ ಮಹಾರಾಷ್ಟ್ರಕ್ಕೆ ಯಾವುದೇ ತೊಂದರೇ ಇಲ್ಲ.
ರಾಜ್ಯದ ಜನರಿಗೆ ತೊಂದರೆ ಆಗುತ್ತದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ, ಕೂಲಿ ಕೆಲಸದವರಿಗೆ ಕಷ್ಟ ಆಗುತ್ತದೆ.
ಈ ಬಗ್ಗೆ ಬಂದ್ ಗೆ ಕರೆ ಕೊಡುವವರು ಚಿಂತಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಇತ್ತ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಬಂದ್ ಬಗ್ಗೆ ಮಾತನಾಡುತ್ತಾ, ಕನ್ನಡಪರ ಚಳುವಳಿಗಾರರು ಬಂದ್‍ಗೆ ಕರೆ ಕೊಟ್ಟಿದ್ದಾರೆ.
ಅದು ಒಂದು ದಿನ ತೀವ್ರ ತರವಾದ ಬಂದ್ ಮಾಡಿದರೆ ತಪ್ಪೇನು ಆಗಲ್ಲ ಎಂದು ಹೇಳಿದ್ದಾರೆ.
ಜೊತೆಗೆ ಎಂಇಎಸ್, ಮಹಾರಾಷ್ಟ್ರಕ್ಕೆ ಎಚ್ಚರಿಕೆ ಕೊಡುವ ದೃಷ್ಟಿಯಿಂದ ಬಂದ್ ಅಗತ್ಯವಿದ್ದು, ಇದಕ್ಕೆ ಜೆಡಿಎಸ್ ಬೆಂಬಲವಿದೆ ಎಂದು ತಿಳಿಸಿದ್ದಾರೆ.









