ಬೆಂಗಳೂರು, ಮೇ 14 : ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಮೈಕಲ್ ಮಧು ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮೈಕಲ್ ಮಧು (50) ಅವರು ಬುಧವಾರ ಮಧ್ಯಾಹ್ನ ಊಟ ಮಾಡಿದ ಬಳಿಕ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದು ತಕ್ಷಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮೈಕಲ್ ಮಧು ಶಿವರಾಜ್ ಕುಮಾರ್ ನಟನೆಯ ಓಂ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು. ಶ್, ಎಕೆ 47, ಭಜರಂಗಿ, ಅಧ್ವಮೇಧ, ಸುಪ್ರಭಾತ, ಮಿನುಗುತಾರೆ, ಪಾಪಿಗಳ ಲೋಕದಲ್ಲಿ, ಸೂರ್ಯವಂಶ, ನೀಲಾಂಬರಿ, ಯಮಲೋಕದಲ್ಲಿ ವೀರಪ್ಪನ್, ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೊ ಡಿಮ್ಯಾಂಡು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮೈಕಲ್ ಮಧು ನಟಿಸಿದ್ದರು.
ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್
ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...








