ಹಿಂದೂವಾಗಿ ಜೀಸಸ್, ಅಲ್ಲಾನನ್ನ ದೇವರು ಎಂದು ಒಪ್ಪಿಕೊಳ್ಳಬಹುದು : ಸಿ.ಟಿ.ರವಿ CT Ravi saaksha tv
ಚಿಕ್ಕಮಗಳೂರು : ಅಲ್ಲಾ, ಈಶ್ವರ, ಜೀಸಸ್ ರನ್ನ ದೇವರೆಂದು ಒಪ್ಪಿಕೊಂಡರೆ ಜಗತ್ತಿನಲ್ಲಿ ಸಂಘರ್ಷ ಇರೋದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸರ್ವಧರ್ಮ ಸಮನ್ವಯತೆಯ ಪಾಠ ಮಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಹಿಂದೂವಾಗಿ ಜೀಸಸ್, ಅಲ್ಲಾನನ್ನ ದೇವರು ಎಂದು ಒಪ್ಪಿಕೊಳ್ಳಬಹುದು.
ಹಿಂದೂವಾಗಿ ಚರ್ಚ್, ಮಸೀದಿಗೂ ಕೂಡ ಹೋಗಬಹುದು. ನಮ್ಮಲ್ಲಿ ದೇವನೊಬ್ಬ ನಾಮ ಹಲವು ಎಂಬ ತತ್ವವಿದೆ.
ಆದರೆ ಇಸ್ಲಾಂ ಆದ ತಕ್ಷಣ ಮಸೀದಿ ಹೊರತುಪಡಿಸಿ ದೇವಸ್ಥಾನದ ಬಾಗಿಲು ಬಂದ್ ಆಗುತ್ತೆ ಎಂದು ಹೇಳಿದರು.
ಇನ್ನು ಇಸ್ಲಾಂ, ಕ್ರಿಶ್ಚಿಯನ್ ಧರ್ಮಗಳಲ್ಲಿ ಉಳಿದ ದೇವರುಗಳ ಅಸ್ತಿತ್ವದ ಬಗ್ಗೆ ನಿರಾಕರಣೆ ಇದೆ.
ಈ ವಿಚಾರದಲ್ಲಿ ಎರಡು ಧರ್ಮಗಳು ಆಲೋಚನೆ ಮಾಡಿದರೆ ಉತ್ತಮ.
ಎಷ್ಟು ಮತಿ ಇದ್ಯೋ ಅಷ್ಟು ಮತ ಅನ್ನೋ ಮುಕ್ತತೆಗೆ ಅವಕಾಶ ಸಿಗುತ್ತೆ. ಜಗತ್ತಿನಲ್ಲಿ ಶಾಂತಿ ನೆಲೆಸಲು ಇರುವ ಅಡೆತಡೆಗಳನ್ನು ನಿವಾರಿಸೋಕೆ ಸಾಧ್ಯವಿದೆ.
ಈ ನಿಟ್ಟಿನಲ್ಲಿ ಎಲ್ಲರೂ ಆಲೋಚನೆ ಮಾಡಿದರೆ ಜಗತ್ತು ಸುಖವಾಗಿರುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.









