ನಾಳೆ ದೇಶಾದ್ಯಂತ ಎಲ್ಲ ಆರೋಗ್ಯ ಸೇವೆಗಳು ಬಂದ್….
ವೈದ್ಯರ ಮೇಲೆ ದೆಹಲಿ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ಧ ಪ್ರತಿಭಟಿಸಿ ಡಿಸೆಂಬರ್ 29 ರಂದು ಬೆಳಿಗ್ಗೆ 8 ರಿಂದ ದೇಶಾದ್ಯಂತ ಎಲ್ಲ ಆರೋಗ್ಯ ಸೇವೆಗಳು ಬಂದ್ ಆಗಲಿವೆ.
ನೀಟ್-ಪಿಜಿ 2021 ಕೌನ್ಸೆಲಿಂಗ್ ವಿಳಂಬದ ಬಗ್ಗೆ ದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ವೈದ್ಯರ ನಡುವೆ ಸಂಘರ್ಷ ನಡೆದಿದೆ..
ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಹಲವರು ಗಾಯಗೊಂಡಿದ್ದರು ಇದನ್ನ ವಿರೊಧಿಸಿ ದೇಶಾದ್ಯಂತ ಡಿಸೆಂಬರ್ 29 ರಂದು ಎಲ್ಲಾ ಆರೋಗ್ಯ ಸೇವೆಗಳನ್ನು ಸಂಪೂರ್ಣ ಹಿಂತೆಗೆದುಕೊಳ್ಳಲಾಗುವುದು ಎಂದು ಫೆಡರೇಷನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್ ಕರೆ ನೀಡಿದೆ.
ಪ್ರತಿಭಟನೆಯ ಸಮಯದಲ್ಲಿ ಮಹಿಳಾ ವೈದ್ಯರನ್ನು ಪುರುಷ ಪೊಲೀಸ್ ಸಿಬ್ಬಂದಿ ಕ್ರೂರವಾಗಿ ಥಳಿಸಿ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಎಫ್ ಎಐಎಂಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.








