5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ
ಮಧ್ಯಪ್ರದೇಶ : 5 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಂದಿರುವ ಘಟನೆ ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಬಾಲಕಿಯ ಮೃತದೇಹವು ಬಟ್ಟೆಯಿಂದ ಸುತ್ತಿರುವ ಸ್ಥಿತಿಯಲ್ಲಿ ಮನೆಯ ಮೇಲ್ಛಾವಣಿ ಮೇಲೆ ಪತ್ತೆಯಾಗಿದೆ..
ಭಾನುವಾರ ರಾತ್ರಿ ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯ ಕತ್ತು ಹಿಸುಕಿ ಕೊಲೆಮಾಡಲಾಗಿರೋ ವಿಚಾರ ಬೆಳಕಿಗೆ ಬಂದಿದೆ. ಬಾಲಕಿಯ ನೆರೆಮನೆಯಲ್ಲಿ ವಾಸಿಸುತ್ತಿರುವ ಸಂಶಯಾಸ್ಪದ ವ್ಯಕ್ತಿಯನ್ನು ಪೊಲೀಸರು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿ ನಾಪತ್ತೆಯಾಗಿದ್ದು, ಆಕೆಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾಲಕಿ ಶವ ತಮ್ಮ ಮನೆಯ ಮೇಲ್ಚಾವಣಿಯಲ್ಲಿ ಪತ್ತೆಯಾದ ಹಿನ್ನೆಲೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಮತ್ತು ಕೊಲೆ, ಮಕ್ಕಳ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.








