ಡಿಕೆಶಿ ಮೇಕೆದಾಟು ಮಕ್ಮಲ್ ಟೋಪಿ ಹಾಕಲು ಹೊರಟ್ಟಿದ್ದಾರೆ : ಹೆಚ್.ಡಿ.ಕುಮಾರಸ್ವಾಮಿ HD Kumaraswamy
ಬೆಂಗಳೂರು : ಡಿ.ಕೆ.ಶಿವಕುಮಾರ್ ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ಮೇಕೆದಾಟು ಮಕ್ಮಲ್ ಟೋಪಿ ಹಾಕಲು ಹೊರಟಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ.
ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷರು.
ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ʼಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ.
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ. ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷರು. ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ʼಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ. 1/13 pic.twitter.com/DrUIaC6Wlr
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2021
ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಶ್ರೀ ಹೆಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು.
ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ.
ಅವರಿಗೆ ಸತ್ಯ ಹೇಳಲು ನಾಲಿಗೆ ಹೊರಳುತ್ತದೆ. ಆದರೆ; ಸತ್ಯಕ್ಕೆ ನಾಲಿಗೆ ಪ್ರಮೇಯವೇ ಇಲ್ಲ. ಸತ್ಯ ಸತ್ಯವೇ. ದೇವೇಗೌಡರು ಅಂತಹ ‘ಸತ್ಯದ ಸಾಕ್ಷಿ’.
ನೀರಾವರಿಗಾಗಿ ಅವರು ಅವಿರತವಾಗಿ ಶ್ರಮಿಸಿ ನಡೆದಾಡಿದ ನೆಲದ ಮಣ್ಣಿನಮಕ್ಕಳ ನಂಬಿಕೆಯನ್ನೇ ʼಬುಲ್ಡೋಜ್ʼ ಮಾಡುವಂಥ ರಾಜಕಾರಣ ʼಕೈʼ ಪಕ್ಷ ಮಾಡುತ್ತಿದೆ.
ಬೆಂಗಳೂರಿನ ನ್ಯಾಯಯುತ ಪಾಲು, ಕಾವೇರಿ 4ನೇ ಹಂತದ 9 ಟಿಎಂಸಿ ನೀರನ್ನು ತಮಿಳುನಾಡಿನ ಒತ್ತಡಕ್ಕೆ ಮಣಿದು ತಡೆದಿತ್ತು ಕಾಂಗ್ರೆಸ್.
ಪಾಪ ತೊಳೆಯುವ ತಾಯಿ ʼಲೋಕಪಾವನಿʼ ಈಗ ವೋಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ. ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಡಿಸೈನ್ ಶೂರರಿಗೆ ಮುಂದೆ ಕಾದಿದೆ ಶಾಸ್ತಿ. ಭೂತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣʼದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೂ ಬಿದ್ದಿದೆ. 12/13
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2021
ಆಗ ಪಿ.ವಿ.ನರಸಿಂಹರಾವ್ ಪ್ರಧಾನಿ. ಕನ್ನಡಿಗರ ಕನಸುಗಳಿಗೆ ಕೊಳ್ಳಿ ಇಟ್ಟ ಅದೇ ಪಕ್ಷ ಈಗ ಸತ್ಯಗಳನ್ನು ಹೂತು ಮುಜುಗರವಿಲ್ಲದೆ ಮತಯಾತ್ರೆಗೆ ಹೊರಟಿದೆ.
ಆಗ ಸಿಎಂ ಆಗಿದ್ದ ಗೌಡರನ್ನು ತಡೆದ ಪಕ್ಷಕ್ಕೆ ಪ್ರಧಾನಿಯಾದ ಗೌಡರನ್ನು ತಡೆಯಲು ಧೈರ್ಯ ಸಾಲಲಿಲ್ಲ.
ಕಾಂಗ್ರೆಸ್ ಕುತ್ಸಿತತನದಿಂದ ತಡೆಯಲ್ಪಟ್ಟಿದ್ದ 9 ಟಿಎಂಸಿ ನೀರು ರಾಜ್ಯಕ್ಕೆ ದಕ್ಕುವ ಯೋಜನೆಗೆ ಮಣ್ಣಿನಮಗ ಎದೆಗುಂದದೆ ಹಸಿರುನಿಶಾನೆ ತೋರಿದ್ದರು. ಜಪಾನ್ʼನಿಂದ ಹಣವನ್ನೂ ತಂದರು ಎಂದು ತಿಳಿಸಿದ್ದಾರೆ.







