ಹೊಸದಿಲ್ಲಿ, ಮೇ 14 : ಇಂದು ತಬ್ಲಿಘಿ ಜಮಾತ್ ಸದಸ್ಯರು ಕ್ವಾರಂಟೈನ್ ಅವಧಿ ಮುಗಿಸಿದವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ 35 ದಿನಗಳಿಂದ ಕ್ವಾರಂಟೈನ್ ನಲ್ಲಿ ಇದ್ದರೂ ತಬ್ಲಿಘಿ ಜಮಾತ್ ಸದಸ್ಯರನ್ನು ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಜಮಾತ್ ಸದಸ್ಯರು ದೆಹಲಿ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
ದೆಹಲಿಯ ನಿಜಾಮುದ್ದೀನ್ ನಲ್ಲಿ ದೇಶದಾದ್ಯಂತ ಕೊರೊನಾ ಸೋಂಕು ಹರಡಲು ಆರಂಭಿಸಿದ ಅವಧಿಯಲ್ಲಿ ಹಮ್ಮಿಕೊಂಡಿದ್ದ ತಬ್ಲಿಘಿ ಜಮಾತ್ ನ ಧಾರ್ಮಿಕ ಸಮಾವೇಶ ಕಾರ್ಯಕ್ರಮದಲ್ಲಿ ದೇಶ ವಿದೇಶಗಳಿಂದ ಸಾವಿರಾರು ಮುಸ್ಲಿಂ ಸಮುದಾಯದ ಜನರು ಪಾಲ್ಗೊಂಡಿದ್ದರು. ಈ ಸಮಾವೇಶದಲ್ಲಿ ಪಾಲ್ಗೊಂಡ ಕೆಲವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡು ಸಾವನ್ನಪ್ಪುತ್ತಿದ್ದಂತೆ, ಸರ್ಕಾರಗಳು ಮುಂಜಾಗ್ರತಾ ಕ್ರಮವಾಗಿ ಸಮಾವೇಶದಲ್ಲಿ ಪಾಲ್ಗೊಂಡ ಎಲ್ಲರಿಗೂ ಕೊರೊನಾ ಪರೀಕ್ಷೆಗೆ ನಡೆಸಿ ಕ್ವಾರಂಟೈನ್ ಗೆ ಒಳಪಡಿಸಿತು. ಇದೀಗ ಕಳೆದ 35 ದಿನಗಳಿಂದ ತಬ್ಲಿಘಿ ಜಮಾತ್ ಸದಸ್ಯರನ್ನು ಕ್ವಾರಂಟೈನ್ ನಲ್ಲಿರಿಸಿದ್ದು, ಕೊರೊನಾ ಪರೀಕ್ಷೆಯ ವರದಿಯಲ್ಲೂ ನೆಗೆಟಿವ್ ಬಂದಿದೆ. ಆದರೂ ಕ್ವಾರಂಟೈನ್ ಅವಧಿ ಮುಕ್ತಾಯಗೊಳಿಸಿಲ್ಲ ಎಂದು ಜಮಾತ್ ಸದಸ್ಯರು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕ್ವಾರಂಟೈನ್ ಅವಧಿ ಮುಗಿಸಿದವರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಈ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ನಡೆಸಲಿದೆ .
ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್
ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...








