ಆಫ್ರಿಕಾ ನೆಲದಲ್ಲಿ ಬುಮ್ರಾ ಚರಿತ್ರೆ.. ಭಾರತದ ಮೊದಲ ಬೌಲರ್ jasprit-bumrah saaksha tv
ಭಾರತದ ಸ್ಟಾರ್ ಬೌಲರ್ ಜಸ್ ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಭಾರತದ ಪರ ವಿದೇಶದಲ್ಲಿ 100 ಟೆಸ್ಟ್ ವಿಕೆಟ್ ಪಡೆದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.
ಸದ್ಯ ಸೆಂಚುರಿಯನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಗ್ ನಲ್ಲಿ ಬುಮ್ರಾ ಈ ಸಾಧನೆ ಮಾಡಿದ್ದಾರೆ.
ಪಂದ್ಯ ಗೆಲ್ಲಲು 305 ರನ್ ಗಳ ಗುರಿ ಪಡೆದಿರುವ ದಕ್ಷಿಣ ಆಫ್ರಿಕಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 94 ರನ್ ಗಳಿಸಿದೆ.
ದಕ್ಷಿಣ ಆಫ್ರಿಕಾದ ಎರಡನೇ ಇನ್ನಿಂಗ್ಸ್ ನಲ್ಲಿ ಬುಮ್ರಾ ವ್ಯಾನ್ ಡೆರ್ ದಾಸೆನ್ ಅವರನ್ನ ಬಲಿ ಪಡೆಯುವ ಮೂಲಕ ವಿದೇಶದಲ್ಲಿ 100 ಟೆಸ್ಟ್ ವಿಕೆಟ್ ಸಾಧನೆ ಮಾಡಿದ್ದಾರೆ.
ಇಲ್ಲಿ ಗಮನಿಸಬೇಕಾದ ವಿಚಾರ ಏನಂದರೇ ಬುಮ್ರಾ ಕೇವಲ 43 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದಾರೆ,
ಇನ್ನು ಜಸ್ಪ್ರೀತ್ ಬುಮ್ರಾ ಭಾರತದ ಪರ ಈವರೆಗೂ 25 ಟೆಸ್ಟ್ ಪಂದ್ಯಗಳನ್ನಾಡಿದ್ದು, ಒಟ್ಟು 105 ವಿಕೆಟ್ ಗಳನ್ನು ಪಡೆದಿದ್ದಾರೆ.
ವಿಶೇಷ ಏನಂದರೇ ಬುಮ್ರಾ ಅವರ 105 ವಿಕೆಟ್‌ಗಳಲ್ಲಿ 101 ವಿಕೆಟ್‌ಗಳನ್ನ ವಿದೇಶದಲ್ಲಿಯೇ ಪಡೆದಿದ್ದಾರೆ.
ಇದಲ್ಲದೇ ಕಳೆದ 2018ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ ಬುಮ್ರಾ, ಅದೇ ನೆಲದಲ್ಲಿ ನೂರು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಅಂದಹಾಗೆ ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ.
ಮೊದಲ ಇನ್ನಿಂಗ್ಸ್ ನಲ್ಲಿ ಎರಡು ವಿಕೆಟ್ ಪಡೆದಿದ್ದ ಬುಮ್ರಾ, ಈಗ ಎರಡನೇ ಇನ್ನಿಂಗ್ಸ್ ನಲ್ಲಿ ವ್ಯಾನ್ ಡೆರ್. ಮತ್ತು ಕೇಶವ್ ಮಹಾರಾಜ್ ಅವರನ್ನು ಪೆವಿಲಿಯನ್ ಗೆ ಕಳುಹಿಸಿದ್ದಾರೆ.









