ಬೆಂಗಳೂರು, ಮೇ15 : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ವೈಜ್ಞಾನಿಕ ಆಧಾರವಿಲ್ಲದೆ ಆನ್ ಲೈನ್ ತರಗತಿ ನಡೆಸುವ ಶಾಲಾಡಳಿತದ ಮೇಲೆ ನಿಗಾ ವಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದಾರೆ.
ಲಾಕ್ ಡೌನ್ ನ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಿರುವುದರಿಂದ ಕೆಲವು ಖಾಸಗಿ ಶಾಲೆಗಳು ಅವಶ್ಯಕತೆ ಇಲ್ಲದಿದ್ದರೂ ವಿದ್ಯಾರ್ಥಿಗಳನ್ನು ಮತ್ತ ಪೋಷಕರನ್ನು ಶೋಷಿಸುತ್ತಿರುವುದು ಕಂಡುಬರುತ್ತಿದೆ. ಯಾವುದೇ ವೈಜ್ಞಾನಿಕ ಆಧಾರಗಳಿಲ್ಲದೇ ಆನ್ ಲೈನ್ ತರಗತಿ ನಡೆಸಿ ಮಕ್ಕಳಿಗೆ ಅನಾವಶ್ಯಕ ಶೋಷಣೆ ಮಾಡಬಾರದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ಮಕ್ಕಳು ತಾಂತ್ರಿಕ ಪರಿಕರಗಳನ್ನು ಬಳಸುವಾಗ ಅವರ ಆರೋಗ್ಯದ ಮೇಲೆ ಅದು ಅಡ್ಡ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಅದನ್ನು ಗಮನದಲ್ಲಿಟ್ಟುಕೊಂಡು ಆನ್ ಲೈನ್ ತರಗತಿ ನಡೆಸಬೇಕಾಗುತ್ತದೆ. ಆದ್ದರಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ದಿನವಿಡೀ ಅವೈಜ್ಞಾನಿಕವಾಗಿ ತರಗತಿ ನಡೆಸುವ ಕ್ರಮಗಳಿಗೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಾದ ಸುತ್ತೋಲೆ ಹೊರಡಿಸಬೇಕು ಎಂದು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ
ದಕ್ಷಿಣ ಭಾರತದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಹೊಡೆತ ಬಿದ್ದಿದೆ. ಕೇರಳದಲ್ಲಿ ಜಯಭೇರಿ ಬಾರಿಸಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್‌ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ದೊಡ್ಡ...








