ಮಹಾರಾಷ್ಟ್ರದಲ್ಲಿ ಕೊರೋನಾ Corona ಆರ್ಭಟ; 10 ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಸೋಂಕು Saaskha TV
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮಾಹಿತಿ
ಮಹಾರಾಷ್ಟ್ರದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಳ
10 ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೊರೋನಾ ಪಾಸಿಟಿವ್
ದೇಶದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿರುವುದು ಜನರಲ್ಲಿ ಆತಂಕ ಮನೆಮಾಡಿದೆ.
ಇದರೊಂದಿಗೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
ಹಾಗೆ ಮಹಾರಾಷ್ಟ್ರದಲ್ಲಿ ಕೂಡಾ ಕೊರೋನಾ ಹಾಗೂ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
ರಾಜ್ಯದ 10 ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ ಎಂದು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ.
ಅಲ್ಲದೆ ಆರೋಗ್ಯದಲ್ಲಿ ಏರು ಪೇರು ಕಂಡು ಬಂದರೆ ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಮಾಸ್ಕ ಧರಿಸಿ ಸಾಮಾಜಿಕ ಅಂತರ ಕಾಪಾಡಿ, ಎಂದು ಉಪ ಮುಖ್ಯಮಂತ್ರಿ ಮನವಿ ಮಾಡಿದರು.
ಕೋವಿಡ್-19 ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 1431ಕ್ಕೆ ಏರಿಕೆಯಾಗಿದ್ದು, ಮಹರಾಷ್ಟ್ರ ಒಂದರಲ್ಲೆ 454 ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ಪ್ರಕರಣಗಳ ಸಂಖ್ಯೆ ಶೇ.35ರಷ್ಟು ಏರಿಕೆಯಾಗಿದೆ.