ಮತ್ತೆ ಕರೋನಾ ಆರ್ಭಟ Saaksha Tv
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕರೋನಾ ಆರ್ಭಟ ಶುರುವಾಗಿದೆ. ಇವತ್ತು ರಾಜ್ಯದಲ್ಲಿ 1033 ಕೊರೋನಾ ಕೇಸ್ ಗಳು ಪತ್ತೆಯಾಗಿವೆ. 5 ಮಂದಿ ಸೋಂಕಿತರು ಕೊನೆಯುಸಿರೆಳೆದಿದ್ದಾರೆ.
1033 ಕೇಸ್ ಗಳ ಪೈಕಿ ರಾಜ್ಯ ರಾಜಧಾನಿ ಬೆಂಗಳೂರು ಒಂದರಲ್ಲೆ 810 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ. ಐದು ಸಾವುಗಳ ಪೈಕಿ ಎರದು ಸಾವುಗಳು ಬೆಂಗಳೂರಿನಲ್ಲಿ ಸಂಭವಿಸಿವೆ.
ಇಂದಿನ ಕೊರೊನಾ ಸೋಂಕು ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಕೊರೋನಾ ಸಕ್ರೀಯ ಪ್ರಕರಣಗಳ ಸಂಖ್ಯೆ 9386ಕ್ಕೆ ಏರಿಕೆಯಾಗಿದೆ.








