ಡಿ.ಕೆ.ಶಿವಕುಮಾರ್ DK Shivakumar ಶಾಪಗ್ರಸ್ಥ : ಸಿ.ಟಿ.ರವಿ ವಾಗ್ದಾಳಿ
ಬೆಂಗಳೂರು : ಅವರೇ ಶಾಪಗ್ರಸ್ಥರು, ಬೇಲ್ ಮೇಲೆ ಹೊರಬಂದಿದ್ದಾರೆ. ಬೇಲ್ ಕ್ಯಾನ್ಸಲ್ ಆದರೆ ಜೈಲಿಗೆ ಹೋಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯವರು ಭಸ್ಮವಾಗುತ್ತಾರೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸಿ.ಟಿ.ರವಿ, ಡಿ.ಕೆ.ಶಿವಕುಮಾರ್ ವಶಿಷ್ಠರು ಅಲ್ಲ, ವಿಶ್ವಾಮಿತ್ರನೂ ಅಲ್ಲ.
ಅವರೇನಾದರೂ ತಮ್ಮನ್ನು ಭಸ್ಮಾಸುರ ಅಂತ ಅಂದುಕೊಂಡಿದ್ದರೆ, ಹೇಗೆ ಕಾಂಗ್ರೆಸ್‌ನವರ ತಲೆ ಮೇಲೆಯೇ ಕೈ ಇಡಿಸಬೇಕು ಎನ್ನುವುದು ನಮಗೆ ಗೊತ್ತಿದೆ ಎಂದು ಟಾಂಗ್ ನೀಡಿದರು.
ದೇವಾಲಯಗಳನ್ನು ಸ್ವತಂತ್ರ್ಯಗೊಳಿಸುವ ಮುಖ್ಯಮಂತ್ರಿಗಳ ನಿರ್ಧಾರವನ್ನು ಸ್ವಾಗತಿಸಿದ ಸಿ.ಟಿ.ರವಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡಿ.ಕೆ.ಶಿವಕುಮಾರ್, ರಾಜ್ಯದ ದೇವಾಲಯಗಳು ಜನರ ಆಸ್ತಿ. ಬಿಜೆಪಿ ಸರ್ಕಾರ ಈ ಆಸ್ತಿಯನ್ನು ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರಿಗೆ ಹಸ್ತಾಂತರ ಮಾಡಲು ಮುಂದಾಗಿದೆ.
ಇದು ಹಿಂದೂ ವಿರೋಧಿ ನೀತಿಯಾಗಿದ್ದು, ರಾಜ್ಯದ ಜನ ಹಾಗೂ ಆ ದೇವರು ಬಿಜೆಪಿಯನ್ನು ಕ್ಷಮಿಸುವುದಿಲ್ಲ.
ಈ ನಿರ್ಧಾರದಿಂದ ಬಿಜೆಪಿ ಸರ್ಕಾರ ಸುಟ್ಟು ಭಸ್ಮವಾಗಲಿದೆ. ಕಾಂಗ್ರೆಸ್ ಹಿಂದೂ ವಿರೋಧಿಯಲ್ಲ, ಬಿಜೆಪಿ ನಿಜವಾದ ಹಿಂದೂ ವಿರೋಧಿ ಎಂದು ಕಿಡಿಕಾರಿದ್ದರು.








