ಬಳ್ಳಾರಿಯಲ್ಲಿ ಕೊರೊನಾ ಮಹಾಸ್ಪೋಟ – 21 ವಿದ್ಯಾರ್ಥಿಗಳಿಗೆ ಸೋಂಕು
ಬಳ್ಳಾರಿಯಲ್ಲಿ ಕೊರೊನಾ ಮಹಾಸ್ಪೋಟವಾಗಿದೆ. ವಿಮ್ಸ್ ವೈದ್ಯಕೀಯ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು , ಸುತ್ತ ಮುತ್ತಲಿನ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ..
ಹೌದು.. ಬಳ್ಳಾರಿಯ ವಿಮ್ಸ್ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ 250 ವಿದ್ಯಾರ್ಥಿಗಳಿದ್ದಾರೆ.. ಇವರಲ್ಲಿ ಈಗ 21 ಮಂದಿಗೆ ಸೋಂಕು ದೃಢಪಟ್ಟಿದ್ದು , ಇತರ ವಿದ್ಯಾರ್ಥಿಗಳಲ್ಲೂ ಸಹ ಆತಂಕ ಮನೆ ಮಾಡಿದೆ..
ಸದ್ಯ ಸೋಂಕಿತ ವಿದ್ಯಾರ್ಥಿಗಳನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು , ಹಾಸ್ಟೆಲ್ ನ ಇತರೇ ವಿದ್ಯಾರ್ಥಿಗಳಿಗೆ ಕೋವಿಡಡ್ ಟೆಸ್ಟ್ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ.. ಉಳಿದಂತೆ ಎಲ್ರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎನ್ನಲಾಗಿದೆ..








