ವೀಕೆಂಡ್ ಕರ್ಫ್ಯೂ | ಬೆಂಗಳೂರಲ್ಲಿ ಮೆಟ್ರೋ ಇರುತ್ತೋ.. ಇಲ್ಲವೋ..? weekend curfew in bangalore latest news today saaksha tv
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಮತ್ತೆ ಶುರುವಾಗಿದ್ದು, ಹೆಮ್ಮಾರಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ರಾಜ್ಯದಲ್ಲಿ ಹಾಫ್ ಲಾಕ್ ಡೌನ್ ಮತ್ತು ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ.
ಮುಖ್ಯವಾಗಿ ಬೆಂಗಳೂರಿನಲ್ಲಿ ಹೆಮ್ಮಾರಿ ಸೋಂಕು ರಣಕೇಕೆ ಹಾಕುತ್ತಿದೆ. ಪ್ರತಿ ದಿನ ನಗರದಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲವೂ ಶನಿವಾರ, ಭಾನುವಾರ ಬೆಂಗಳೂರು ಸ್ತಬ್ಧವಾಗಿರಲಿದೆ.
ಇನ್ನು ವೀಕೆಂಡ್ ಕರ್ಫ್ಯೂ ವೇಳೆ ಸಾರಿಗೆಯನ್ನು ಅಗತ್ಯ ಸೇವೆ ಎಂದು ಪರಿಗಣಿಸಲಾಗಿದ್ದು, ವಾರಾಂತ್ಯದ ಕರ್ಫ್ಯೂ ವೇಳೆ ಮೆಟ್ರೋ ಸಂಚಾರಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ. ಶನಿವಾರ – ಭಾನುವಾರ ಎಂದಿನಂತೆ ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ. ಆದ್ರೆ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.
ಅಂದರೇ ಸದ್ಯ ಮೆಟ್ರೋದಲ್ಲಿ ನಿತ್ಯ 1,800 ರಿಂದ 1,900 ಪ್ರಯಾಣಿಕರು ಸಂಚಾರ ಮಾಡುತ್ತಿದ್ದು, ವೀಕೆಂಡ್ ಕರ್ಫ್ಯೂ ವೇಳೆ ಕೇವಲ 800 ರಿಂದ 900 ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈಗ 10ರಿಂದ 15 ನಿಮಿಷಕ್ಕೊಂದು ಮೆಟ್ರೋ ರೈಲು ಕಾರ್ಯಾಚರಣೆಯಾಗುತ್ತಿದ್ದು, ಕರ್ಫ್ಯೂ ವೇಳೆ ಅರ್ಧ ಗಂಟೆಗೊಂದು ಮೆಟ್ರೋ ರೈಲು ಓಡಾಡಲಿದೆ.









