ಸಿ ಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ಇಂದು ಸಚಿವ ಸಂಪುಟದ ಮಹತ್ವದ ಸಭೆ ನಡೆಯಲಿದೆ.
ರಾಜ್ಯದಲ್ಲಿ ಕರೋನಾ ನಿಯಂತ್ರಣದ ಸಂಬಂಧ ಸಚಿವ ಸಂಪುಟದ ಸಹದ್ಯೋಗಿಗಳಿಂದ ಮುಖ್ಯಮಂತ್ರಿಗಳು ಸಲಹೆ ಪಡೆಯಲಿದ್ದಾರೆ. ರಾಜ್ಯದಲ್ಲಿ ಲಾಕ್ಡಾನ್ ಬೇಕೆ ಬೇಡವೆ, ಸೆಮಿಲಾಕ್ಡೌನ್, ಜಾರಿಗೆ ಸಂಬಂಧ ಪಟ್ಟಂತೆ ಇನ್ನಷ್ಟು ಕಠಿಣ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ.
ಸಚಿವ ಸಂಪುಟ ಸಭೆಯ ನಂತರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಜೊತೆ ಸಮಾಲೋಚನೆ ನಡೆಸುವ ಸಾಧ್ಯತ ಇದೆ. ಪ್ರಸ್ತುತ ಬೆಂಗಳೂರಿನಲ್ಲಿ ಮಾತ್ರ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದು, ಹೊರ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಇದೆ.
ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕರು ಕೊವಿಡ್ ಸುರಕ್ಷತಾ ಕ್ರಮಗಳನ್ನ ಪಾಲಿಸಿ ಕೋವಿಡ್ ಹೋರಾಟದಲ್ಲಿ ಸಹಕರಿಸಬೇಕು ಎಂದು ಸರ್ಕಾರ ಕೇಳಿಕೊಂಡಿದೆ..








