ಸಿದ್ದರಾಮಯ್ಯರನ್ನ ರಾಜಕೀಯವಾಗಿ ಮುಗಿಸಲು ಡಿಕೆಶಿ ಪ್ರಯತ್ನ : ಸಿ.ಪಿ.ವೈ ಹೊಸ ಬಾಂಬ್ siddaramaiah d k shivakumar c p yogeshwar ramanagara saaksha tv
ರಾಮನಗರ : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಯತ್ನ ಮಾಡುತ್ತಿದ್ದಾರೆ ಎಂದು ಎಂಎಲ್ ಸಿ ಸಿ.ಪಿ.ಯೋಗೇಶ್ವರ್ ಬಾಂಬ್ ಸಿಡಿಸಿದ್ದಾರೆ.
ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿ.ಪಿ.ಯೋಗೇಶ್ವರ್, ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಯತ್ನ ಮಾಡ್ತಿದ್ದಾರೆ.
ಡಿಕೆಶಿ ಮಾಡುವ ಮೀಟಿಂಗ್ ಎಲ್ಲಾ ನೋಡಿದ್ರೆ ನಾನೇ ಮುಂದಿನ ಕಾಂಗ್ರೆಸ್ ಅಧಿಪತಿ ಎನ್ನುವ ರೀತಿಯಲ್ಲಿ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಸ್ಪಷ್ಟನೆ ನೀಡಿದ ಯೋಗೇಶ್ವರ್, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡರೆ ಸೂಸೈಡ್ ಮಾಡಿಕೊಂಡಂತೆ ಎಂದು ಖಾರವಾಗಿ ನುಡಿದರು.
ಇನ್ನು ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಬಿಜೆಪಿ ಬೆಳೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ. ಇದೆಲ್ಲಾ ಡಿ.ಕೆ.ಬ್ರದರ್ಸ್‌ಗೆ ಆತಂಕ ಮೂಡುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ವಿರುದ್ಧ ಯೋಗೀಶ್ವರ್ ಕಿಡಿಕಾರಿದರು.









