ದೇಶದಲ್ಲಿ ಒಮಿಕ್ರಾನ್, ಕೋವಿಡ್ 3ನೇ ಅಲೆ ಆತಂಕ ಹೆಚ್ಚುತ್ತಲೇ ಇರೋ ಬೆನ್ನಲ್ಲೇ ಇದೀಗ ಮತ್ತೊಂದು ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.. ಇಟಲಿಯಿಂದ ಅಮೃತಸರಕ್ಕೆ ಬಂದಿಳಿದ ಸುಮಾರು 125 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಇರೋದು ದೃಢವಾಗಿದೆ..
ಏರ್ ಇಂಡಿಯಾ ವಿಮಾನದಲ್ಲಿ ಪಂಜಾಬ್‌ನ ಅಮೃತಸರಕ್ಕೆ ಬಂದಿಳಿದ ಪ್ರಯಾಣಿಕರ ಪೈಕಿ 125 ಪ್ರಯಾಣಿಕರಿಗೆ ಕೋವಿಡ್–19 ದೃಢಪಟ್ಟಿದೆ. ಈ ಕುರಿತು ವಿಮಾನ ನಿಲ್ದಾಣದ ನಿರ್ದೇಶಕ ವಿ.ಕೆ.ಸೇಠ್ ಮಾಹಿತಿ ನೀಡಿದ್ದಾರೆ.
ಇಟಲಿಯಿಂದ ಅಮೃತಸರಕ್ಕೆ ಬಂದ ಏರ್ ಇಂಡಿಯಾ ವಿಮಾನದಲ್ಲಿ ಒಟ್ಟು 179 ಪ್ರಯಾಣಿಕರಿದ್ದರು. ಅವರಲ್ಲಿ 125 ಪ್ರಯಾಣಿಕರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಉಳಿದ ಪ್ರಯಾಣಿಕರನ್ನೂ ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ..