ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲ ಹಣ ದಾಯಿ ಶಿಕ್ಷಣ ಸಂಸ್ಥೆಗಳು ಎಲ್ ಕೆಜಿ ಯುಕೆಜಿಯ ಪುಟ್ಟ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ನೀಡುತ್ತಿವೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗರಂ ಆಗಿದ್ದಾರೆ.
ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಎಲ್ ಕೆಜಿ ಯುಕೆಜಿಯ ಆ ಕಂದಗಳಿಗೂ ಆನ್ ಲೈನ್ ಶಿಕ್ಷಣ ಕೊಡುವ ಮನಸ್ಥಿತಿಗೆ ಏನನ್ನಬೇಕು..? ಹಣದ ದುರಾಸೆಯಷ್ಟೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅವರಿಗೆಲ್ಲಾ ಶಿಕ್ಷಣ ಇಲಾಖೆಯ ಕ್ರಮ ಕಾದಿದೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.








