ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗೆ ಗ್ನೀನ್ ಪಾಸ್
ಕರ್ನಾಟಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ
ಗ್ನೀನ್ ಪಾಸ್ ನಿಂದ ಬಸ್ ಗಳಲ್ಲಿ ಪ್ರಯಾಣಕ್ಕೆ ಅನುಕೂಲ
ಬೆಂಗಳೂರು : ರಾಜ್ಯದಲ್ಲಿ ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಗ್ನೀನ್ ಪಾಸ್ ಅಥವಾ ಯೂನಿವರ್ಸಲ್ ಪಾಸ್ ಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಧಾಕರ್, ರಾಜ್ಯದಲ್ಲಿ ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್, ಯೂನಿವರ್ಸಲ್ ಪಾಸ್ ಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಪಾಸ್ ಗಳು ಬಸ್‌ಗಳಲ್ಲಿ ಪ್ರಯಾಣ ಅಥವಾ ಹೋಟೆಲ್, ರೆಸ್ಟೋರೆಂಟ್ ಪ್ರವೇಶ ಹಾಗೂ ಇತರೆ ಅನುಮತಿಗಳಿಗಾಗಿ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಇನ್ನು ಕೊರೊನಾ ಮೂರನೇ ಅಲೆಯನ್ನು ಎದುರಿಸಲು ರಾಜ್ಯ ಸರ್ಕಾರ ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದೆ.
ಕೋವಿಡ್ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಹಲವು ಜವಾಬ್ದಾರಿ ಕೊಟ್ಟಿದ್ದೇವೆ.
ಕಳೆದ ಎರಡು ಅಲೆಗಳ ವೇಳೆ ಅನುಭವ ಪಡೆದ ಅಧಿಕಾರಿಗಳು ಈ ಬಾರಿ ಯಾವುದೇ ಲೋಪ ಆಗದಂತೆ ಕೆಲಸ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.









