ಚುನಾವಣೆ ಹತ್ತಿರ ಬಂದಿದೆ ಹಾಗಾಗಿ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ: ಬೊಮ್ಮಾಯಿ Saaksha tv
ಬೆಂಗಳೂರು: ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಮೇಕೆದಾಟು ಪಾದಯಾತ್ರೆ ಕುರಿತು, ಚುನಾವಣೆ ಹತ್ತಿರ ಬಂದಿದೆ ಅಂತ ರಾಜಕೀಯ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆನ್ನು ಯಾಕೆ ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ಸಾರ್ವಜನಿಕರಿಗೆ ಈಗಾಗಲೆ ತಿಳಿದಿದೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.
ಹಾಗೇ ಸಮ್ಮಿಶ್ರ ಸರ್ಕಾರದಲ್ಲಿ ಡಿಕೆಶಿ ನೀರಾವರಿ ಸಚಿವರಾಗಿದ್ದರು ಆಗ ಏನೂ ಮಾಡಲಿಲ್ಲ. ಕಳೆದ ಮೂರು ವರ್ಷಗಳು ಈ ವಿಚಾರವಾಗಿ ಎಲ್ಲೂ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ಪಕ್ಷ ಐದು ವರ್ಷಗಳು ಸರ್ಕಾರದಲ್ಲಿದ್ದಾಗ ಡಿಪಿಆರ್ ಸರಿಯಾಗಿ ಮಾಡಲಿಲ್ಲ. ನಂತರ ಸಮ್ಮಿಶ್ರ ಸರ್ಕಾರದಲ್ಲಿ ಡಿಪಿಆರ್ ಮಾಡಿದ್ದರು. ಅವರಿಗೆ ಯಾವುದೇ ಬದ್ಧತೆ ಇಲ್ಲ. ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಬಹುತೇಕ ಅವರಿಗೆ ಕೆಲಸ ಮಾಡಿಲ್ಲ ಎಂಬ ಅಪರಾಧ ಮನೋಭಾವ ಕಾಡುತ್ತಿದೆ. ನೀರಾವರಿ ಯೋಜನೆ ಬಗ್ಗೆ ಬದ್ಧತೆಯಿಂದ ಕೆಲಸ ಮಾಡುತ್ತಿಲ್ಲ, ಬದಲಾಗಿ ಜನರನ್ನು ಮರಳು ಮಾಡುತ್ತಿದ್ದಾರೆ. ಕೃಷ್ಣೆಯ ಕುರಿತು ಪಾದಯಾತ್ರೆ ಮಾಡಿದ್ದರು. ಪ್ರತಿವರ್ಷ 10 ಸಾವಿರ ಕೋಟಿ ಕೊಡತಿವಿ, 50 ಸಾವಿರ ಕೋಟಿ ಕೊಡತಿವಿ ಎಂದು ಕೂಡಲಸಂಗಮದಲ್ಲಿ ಪ್ರಮಾಣ ಮಾಡಿದ್ದರು ಆದರೆ 7 ಸಾವಿರನು ಕೊಡಲಿಲ್ಲ. ಮೇಕೆದಾಟು ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದು, ನೋಟಿಸ್ ಕೊಟ್ಟಿದ್ದೇವೆ. ನಾವು ಬದ್ಧತೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.