ಸರ್ಕಾರ ಬದುಕಿದ್ಯಾ.. ಸತ್ತಿದ್ಯಾ ಅಂತಾ ತೋರಿಸ್ತೀವಿ : ಸುಧಾಕರ್
ಬೆಂಗಳೂರು : ಕೊರೊನಾ ಸೋಂಕು ಕಟ್ಟುನಿಟ್ಟಿನ ಕ್ರಮಗಳನ್ನು ಗಾಳಿಗೆ ತೂರಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದೆ.
ಇದಕ್ಕೆ ಆಡಳಿತ ಪಕ್ಷದವರು ವಿರೋಧ ವ್ಯಕ್ತಪಡಿಸಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಸರ್ಕಾರ ಬದುಕಿದೆಯಾ, ಸತ್ತಿದಿಯಾ ಎಂಬುವುದನ್ನು ಇಂದು ತೋರಿಸುತ್ತೇವೆ. ಕಾನೂನು ಉಲ್ಲಂಘನೆ ಮಾಡಿದರೇ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಪಾದಯಾತ್ರೆ ಹೆಸರಲ್ಲಿ ಕಾಂಗ್ರೆಸ್ ನವರು ಬೀದಿ ನಾಟಕ ಮಾಡುತ್ತಿದ್ದಾರೆ.
ಇದನ್ನ ನಾನು ಖಂಡಿಸುತ್ತೇನೆ. ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಇದೆ.ಈ ರೀತಿ ಪಾದಯಾತ್ರೆ ಮಾಡಿದ್ರೆ ಕೊರೊನಾ ಸೋಂಕು ಇನ್ನೂ ಜಾಸ್ತಿ ಆಗುತ್ತದೆ ಎಂದು ಕಿಡಿಕಾರಿದ್ದಾರೆ.
ಇನ್ನು ಕಾಂಗ್ರೆಸ್ ನವರು ಪಾದಯಾತ್ರೆ ಮೂಲಕ ಕಾವೇರಿಗೆ ಅಪಮಾನ ಮಾಡುತ್ತಿದ್ದಾರೆ.
ಬಿಬಿಎಂಪಿ ಚುನಾವಣೆಯಲ್ಲಿ ಗುರಿಯಾಗಿಟ್ಟುಕೊಂಡು ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದೆ ಎಂದು ಆರೋಪಿಸಿದರು.









