ಕಾಂಗ್ರೆಸ್ ಪಾದಯಾತ್ರೆಗೆ ವಿರೋಧವಿಲ್ಲ,, ಅಧಿಕಾರದಲ್ಲಿದ್ದಾಗ ಯಾಕೆ ಮಾಡಲಿಲ್ಲ : ವಾಟಾಳ್ ನಾಗರಾಜ್ vatal nagaraj reaction on congress mekedatu padayatre saaksha tv
ಬೆಂಗಳೂರು : ಮೇಕೆದಾಟು ಯೋಜನೆ ಆಗ್ರಹಿಸಿ ಇಂದಿನಿಂದ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ.
ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪಾದಯಾತ್ರೆ ಮಾಡಲಿ.
ಅದಕ್ಕೆ ನಮ್ಮ ವಿರೋಧವಿಲ್ಲ. ಆದ್ರೆ ಅಧಿಕಾರದಲ್ಲಿದ್ದಾಗ ಯಾಕೆ ಯೋಜನೆಯನ್ನು ಜಾರಿ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಜಾರಿ ಕುರಿತು ಕಾಂಗ್ರೆಸ್ ಪಾದಯಾತ್ರೆಗೆ ವಿರೋಧವಿಲ್ಲ.
ಆದರೆ 6 ವರ್ಷ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯೋಜನೆಯನ್ನ ಜಾರಿ ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಅಲ್ಲದೇ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಇದೇ 19ರಂದು ತಮಿಳುನಾಡು ಗಡಿ ಬಂದ್ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಇದೇ ವೇಳೆ ತಮಿಳುನಾಡು ಸರ್ಕಾರದ ವಿರುದ್ಧ ಕಿಡಿಕಾರಿದ ವಾಟಾಳ್, ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿರುವುದು ಅತ್ಯಂತ ಹೀನಾಯ, ಬೇಜವಾಬ್ದಾರಿತನವಾಗಿದೆ.
ಕೇಂದ್ರ ಸರ್ಕಾರ ಕೂಡಲೇ ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.









